AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepthi Sharma: ಕ್ರಿಕೆಟ್ ಲೋಕದಲ್ಲಿ ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ: ಪುರುಷರಿಗೂ ಸಾಧ್ಯವಾಗಿಲ್ಲ ಈ ಸಾಧನೆ

India Women vs West Indies Women: ದೀಪ್ತಿ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಕೇವಲ 15 ರನ್​ಗಳನ್ನು ಮಾತ್ರ ನೀಡಿ 3 ವಿಕೆಟ್ ಕಿತ್ತರು. ಈ ಮೂಲಕ ಟಿ20 ಅಂತರರಾಷ್ಟ್ರೀಯ ಮಾದರಿಯ ಕ್ರಿಕೆಟ್​ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು.

Vinay Bhat
|

Updated on:Feb 16, 2023 | 7:08 AM

Share
ದಕ್ಷಿಣ ಅಫ್ರಿಕಾದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023 ರಲ್ಲಿ ಭಾರತೀಯ ವನಿತೆಯರು ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದು ಬೀಗಿರುವ ಹರ್ಮನ್​ಪ್ರೀತ್ ಕೌರ್ ಪಡೆ ಗ್ರೂಪ್ ಬಿಯ ಪಾಯಿಂಟ್ ಟೇಬಲ್​ನಲ್ಲಿ 4 ಪಾಯಿಂಟ್​ನೊಂದಿಗೆ ರನ್​ರೇಟ್ ಆಧಾರದ ಮೇಲೆ ದ್ವಿತೀಯ ಸ್ಥಾನದಲ್ಲಿದೆ.

1 / 9
ಬುಧವಾರ ವೆಸ್ಟ್ ಇಂಡೀಸ್ ಮಹಿಳೆಯರ ವಿರುದ್ಧ ನಡೆದ ಪಂದ್ಯದಲ್ಲೂ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರಿ 6 ವಿಕೆಟ್​ಗಳ ಗೆಲುವು ಸಾಧಿಸಿತು. ದೀಪ್ತಿ ಶರ್ಮಾ ಬೌಲಿಂಗ್ ದಾಳಿಗೆ ತತ್ತರಿಸಿದ ಕೆರಿಬಿಯನ್ನರು ಅಲ್ಪ ಮೊತ್ತವನ್ನಷ್ಟೆ ಕಲೆಹಾಕಿದರು. ಬಿಗಿ ದಾಳಿ ನಡೆಸಿದ ದೀಪ್ತಿ ಕ್ರಿಕೆಟ್ ಲೋಕದಲ್ಲಿ ಇತಿಹಾಸವನ್ನು ಕೂಡ  ಸೃಷ್ಟಿಸಿದರು.

2 / 9
ದೀಪ್ತಿ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಕೇವಲ 15 ರನ್​ಗಳನ್ನು ಮಾತ್ರ  ನೀಡಿ 3 ವಿಕೆಟ್ ಕಿತ್ತರು. ಈ ಮೂಲಕ ಟಿ20 ಅಂತರರಾಷ್ಟ್ರೀಯ ಮಾದರಿಯ ಕ್ರಿಕೆಟ್​ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು. ವಿಶೇಷ ಎಂದರೆ ಭಾರತ ಪರ ಟಿ20ಐ ಕ್ರಿಕೆಟ್​ನಲ್ಲಿ ಶತಕದ ವಿಕೆಟ್ ಪಡೆದ ಮೊದಲ ಪ್ಲೇಯರ್ ಇವರಾಗಿದ್ದಾರೆ. ಪುರುಷರ ತಂಡದಲ್ಲೂ ಈ ಸಾಧನೆಯನ್ನು ಯಾರೂ ಮಾಡಿಲ್ಲ.

3 / 9
ಇದಿಷ್ಟೆ ಅಲ್ಲದೆ ಭಾರತ ಪರ ಇದುವರೆಗೆ ಗರಿಷ್ಠ ವಿಕೆಟ್​ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದ ಪೂನಮ್ ಯಾದವ್​ (98 ವಿಕೆಟ್​ 72 ಪಂದ್ಯ) ಅವರನ್ನೂ ದೀಪ್ತಿ ಹಿಂದಿಕ್ಕಿದ್ದಾರೆ. ಭಾರತ ಕ್ರಿಕೆಟ್​ ಕ್ಷೇತ್ರದಲ್ಲಿ ಈ ಪಟ್ಟಿಯ ಮೂರನೇ ಸ್ಥಾನದಲ್ಲಿ 75 ಪಂದ್ಯಗಳಿಂದ 91 ವಿಕೆಟ್ ಪಡೆದು ಯುಜ್ವೇಂದ್ರ ಚಹಲ್ ಇದ್ದಾರೆ. ನಂತರದ ಸ್ಥಾನದಲ್ಲಿ ಭುವನೇಶ್ವರ್​ ಕುಮಾರ್​ 90 ವಿಕೆಟ್​ ತಮ್ಮದಾಗಿಸಿಕೊಂಡಿದ್ದಾರೆ.

4 / 9
ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 2ನೇ ಓವರ್​ನಲ್ಲಿ ಪೂಜಾ ವಸ್ತ್ರಾಕರ್ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ನಾಯಕಿ ಹೇಲೆ ಮ್ಯಾಥ್ಯೂಸ್ 2 ರನ್​ಗೆ ಔಟಾದರು.

5 / 9
ಆದರೆ, 2ನೇ ವಿಕೆಟ್​ಗೆ ಜೊತೆಯಾದ ಎಸ್​ ಟೇಲರ್ (42) ಹಾಗೂ  ಎಸ್ ಕ್ಯಾಂಪ್ಬೆಲ್ಲೆ (30) 73 ರನ್​ಗಳ ಜೊತೆಯಾಟವಾಡಿ ತಂಡಕ್ಕೆ ಆಧಾರವಾಗಿ ನಿಂತರು. ಇವರಿಬ್ಬರ ನಿರ್ಗಮನದ ಬಳಿಕ ವಿಂಡೀಸ್ ಬ್ಯಾಟರ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು.

ಆದರೆ, 2ನೇ ವಿಕೆಟ್​ಗೆ ಜೊತೆಯಾದ ಎಸ್​ ಟೇಲರ್ (42) ಹಾಗೂ ಎಸ್ ಕ್ಯಾಂಪ್ಬೆಲ್ಲೆ (30) 73 ರನ್​ಗಳ ಜೊತೆಯಾಟವಾಡಿ ತಂಡಕ್ಕೆ ಆಧಾರವಾಗಿ ನಿಂತರು. ಇವರಿಬ್ಬರ ನಿರ್ಗಮನದ ಬಳಿಕ ವಿಂಡೀಸ್ ಬ್ಯಾಟರ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು.ಆದರೆ, 2ನೇ ವಿಕೆಟ್​ಗೆ ಜೊತೆಯಾದ ಎಸ್​ ಟೇಲರ್ (42) ಹಾಗೂ ಎಸ್ ಕ್ಯಾಂಪ್ಬೆಲ್ಲೆ (30) 73 ರನ್​ಗಳ ಜೊತೆಯಾಟವಾಡಿ ತಂಡಕ್ಕೆ ಆಧಾರವಾಗಿ ನಿಂತರು. ಇವರಿಬ್ಬರ ನಿರ್ಗಮನದ ಬಳಿಕ ವಿಂಡೀಸ್ ಬ್ಯಾಟರ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು.

6 / 9
ದೀಪ್ತಿ ಶರ್ಮಾ ಬೌಲಿಂಗ್ ದಾಳಿಯನ್ನು ಎದುರಿಸಲು ವೆಸ್ಟ್ ಇಂಡೀಸ್ ಮಹಿಳೆಯರು ವಿಫಲರಾದರು. ಚೇಡಿಯನ್ ನೆಶನ್ 21 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ವೆಸ್ಟ್ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 118 ರನ್​ಗಳಿಸಲಷ್ಟೇ ಶಕ್ತರಾದರು. ಭಾರತ ಪರ ದೀಪ್ತಿ 3 ವಿಕೆಟ್ ಹಾಗೂ ರೇಣುಕಾ ಸಿಂಗ್, ಪೂಜಾ ವಸ್ತ್ರಾಕರ್ ತಲಾ 1 ವಿಕೆಟ್ ಪಡೆದರು.

7 / 9
119 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ಆರಂಭಿಕರಾದ ಶಫಾಲಿ ವರ್ಮಾ 28 ರನ್​ ಬಾರಿಸಿದರೆ, ಸ್ಮೃತಿ ಮಂಧಾನ 10 ರನ್​ಗಳಿಸಿ ಔಟಾದರು. ಆ ಬಳಿಕ ಬಂದ ಜೆಮಿಮಾ 1 ರನ್​ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಗೂಡಿದ ಹರ್ಮನ್​ಪ್ರೀತ್ ಕೌರ್ ಹಾಗೂ ರಿಚಾ ಘೋಷ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

8 / 9
42 ಎಸೆತಗಳಲ್ಲಿ 33 ರನ್​ ಬಾರಿಸುವ ಮೂಲಕ ಹರ್ಮನ್​ಪ್ರೀತ್ ಕೌರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರೆ, ರಿಷಾ ಘೋಷ್ 32 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು. ಅದರಂತೆ ಭಾರತ ಮಹಿಳಾ ತಂಡ 18.1 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 119 ರನ್​ ಬಾರಿಸುವ ಮೂಲಕ ಜಯ ಸಾಧಿಸಿತು.

9 / 9

Published On - 7:08 am, Thu, 16 February 23

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ

ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ