Delhi Capitals: 16 ಸೀಸನ್​ಗಳಲ್ಲಿ 1 ಬಾರಿ: 2 ಆವೃತ್ತಿಗಳಲ್ಲಿ 2 ಬಾರಿ..!

IPL 2024 - WPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡ್ಕೆ ಚಾಂಪಿಯನ್ ಪಟ್ಟ ತಂದುಕೊಡಲು ವುಮೆನ್ಸ್ ತಂಡ ತುದಿಗಾಲಲ್ಲಿ ನಿಂತಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಫೈನಲ್​ಗೆ ಪ್ರವೇಶಿಸಿದ್ದು, ಈ ಮೂಲಕ ಬ್ಯಾಕ್ ಟು ಬ್ಯಾಕ್ ಫೈನಲ್​​ಗೇರಿದ ವಿಶೇಷ ಸಾಧನೆ ಮಾಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 14, 2024 | 12:31 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಶುರುವಾಗಿ 16 ವರ್ಷಗಳೇ ಕಳೆದಿವೆ. ಈ ಹದಿನಾರು ವರ್ಷಗಳಲ್ಲಿ ಕಪ್ ಗೆಲ್ಲದ ತಂಡಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಒಂದು. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ 16 ಆವೃತ್ತಿಗಳಲ್ಲಿ ಫೈನಲ್​ ಆಡಿರುವುದು ಒಮ್ಮೆ ಮಾತ್ರ ಎಂಬುದೇ ಅಚ್ಚರಿ.

1 / 5
IPL 2020 ರಲ್ಲಿ ಚೊಚ್ಚಲ ಬಾರಿ ಫೈನಲ್​ಗೆ ಪ್ರವೇಶಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ವಿಫಲವಾಗಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 5 ವಿಕೆಟ್​ಗಳ ಸೋಲನುಭವಿ ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶ ಕೈಚೆಲ್ಲಿಕೊಂಡಿತು. ಇದಾದ ಬಳಿಕ ಡೆಲ್ಲಿ ಐಪಿಎಲ್​ಗೆ ಪ್ರವೇಶಿಸಿಲ್ಲ.

2 / 5
ಆದರೆ ಮತ್ತೊಂದೆಡೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಫೈನಲ್​ಗೆ ಪ್ರವೇಶಿಸಿದೆ. ಅಂದರೆ ಮೊದಲ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಕೂಡ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

3 / 5
ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಆವೃತ್ತಿಗಳಲ್ಲಿ ಫೈನಲ್​ಗೇರಿದ ವಿಶೇಷ ಸಾಧನೆಗೈದಿದೆ. ಇನ್ನು ಫೈನಲ್ ಪಂದ್ಯವು ಭಾನುವಾರ ನಡೆಯಲಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

4 / 5
ಅಂದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ಒಂದೇ ಫ್ರಾಂಚೈಸಿಯ ಎರಡು ತಂಡಗಳ ಪ್ರದರ್ಶನ. 16 ಸೀಸನ್​ಗಳಲ್ಲಿ ಒಮ್ಮೆ  ಮಾತ್ರ ಫೈನಲ್​ಗೆ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪುರುಷರ ತಂಡ ಒಂದೆಡೆಯಾದರೆ, 2 ಸೀಸನ್​ಗಳಲ್ಲೂ ಫೈನಲ್​ಗೆ ಎಂಟ್ರಿ ಕೊಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರ ತಂಡ ಇನ್ನೊಂದೆಡೆ. ಅಲ್ಲದೆ DC ತಂಡಕ್ಕೆ ಚೊಚ್ಚಲ ಟ್ರೋಫಿ ಗೆದ್ದುಕೊಡುವ ವಿಶ್ವಾಸದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ.

5 / 5
Follow us