AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರನ್ ಸೋಲುಗಳೊಂದಿಗೆ ಹೀಗೊಂದು ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

IPL 2026 DC vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 209 ರನ್​ಗಳಿಸಿ ಕೇವಲ ಒಂದು ರನ್​​ನಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 09, 2026 | 7:57 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ಈ ಪಂದ್ಯದಲ್ಲಿ ಒಂದು ರನ್​ನ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ವಿಶೇಷ ದಾಖಲೆಯೊಂದನ್ನು ಬರೆದಿದೆ.

1 / 6
ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಶುಭ್​​ಮನ್ ಗಿಲ್ (70), ಜೋಸ್ ಬಟ್ಲರ್ (52) ಹಾಗೂ ವಾಷಿಂಗ್ಟನ್ ಸುಂದರ್​​ (55) ಅವರ ಅರ್ಧಶತಕಗಳ ನೆರವಿನೊಂದಿಗೆ 20 ಓವರ್​ಗಳಲ್ಲಿ 210 ರನ್​ ಕಲೆಹಾಕಿತು.

2 / 6
ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 13 ರನ್​ಗಳು ಬೇಕಿದ್ದವು. ಆದರೆ ಅಂತಿಮ ಓವರ್​ನಲ್ಲಿ ಕಲೆಹಾಕಿದ್ದು ಕೇವಲ 11 ರನ್​ಗಳು ಮಾತ್ರ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ರನ್​​ನಿಂದ ಸೋಲೊಪ್ಪಿಕೊಂಡಿತು.

3 / 6
ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 1 ರನ್​ನಿಂದ ಸೋತ ತಂಡವೆಂಬ ಹಣೆಪಟ್ಟಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಅಂದರೆ ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಪಡೆಯು ಮೂರು ಬಾರಿ ಒಂದು ರನ್​ ಅಂತರದಿಂದ ಸೋತ ನಿದರ್ಶನಗಳಿವೆ.

4 / 6
2015 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ರನ್​ಗಳ ಅಂತರದಿಂದ ಮೊದಲ ಬಾರಿಗೆ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, 2016 ರಲ್ಲಿ ಗುಜರಾತ್ ಲಯನ್ಸ್ ತಂಡದ ವಿರುದ್ಧ ಒಂದು ರನ್​ನಿಂದನೇ ಸೋಲೊಪ್ಪಿಕೊಂಡಿದ್ದರು. ಇನ್ನು 2021 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ರನ್​ನ ಅಂತರದಿಂದ ಸೋಲನುಭವಿಸಿದ್ದರು. 

5 / 6
ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 1 ರನ್​​ ಅಂತರದಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಒಂದು ರನ್​ ಅಂತರದಿಂದ ಸೋತ ತಂಡವೆಂಬ ದಾಖಲೆಯನ್ನು ನಿರ್ಮಿಸಿದೆ.

6 / 6
Follow Us
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು

ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ

ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು

ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ

ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ

ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ

ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ

ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ