ಕೊನೆಯ ಎಸೆತದಲ್ಲಿ ರೋಚಕ ಜಯ: WPL ನಲ್ಲಿ ಹೊಸ ಚರಿತ್ರೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

Updated on: Feb 16, 2025 | 9:55 AM

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾವುದೇ ತಂಡ ಕೊನೆಯ 2 ವಿಕೆಟ್​ಗಳಿರುವಾಗ ಗೆದ್ದ ಇತಿಹಾಸ ಇರಲಿಲ್ಲ. ಆದರೆ ಈ ಬಾರಿ 2023ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಗಿದೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

1 / 5
ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡರು.

ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡರು.

2 / 5

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸಿವರ್ ಬ್ರಂಟ್ 59 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ ಅಜೇಯ 80 ರನ್ ಬಾರಿಸಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ 42 ರನ್​ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 19.1 ಓವರ್​ಗಳಲ್ಲಿ 164 ರನ್​ ಬಾರಿಸಿ ಆಲೌಟ್ ಆಯಿತು.

3 / 5

165 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ 18 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 43 ರನ್​ ಸಿಡಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಿಕಿ ಪ್ರಸಾದ್ 33 ಎಸೆತಗಳಲ್ಲಿ 35 ರನ್ ಬಾರಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಲ್ಸ್ ತಂಡವು ಕೊನೆಯ ಎಸೆತದಲ್ಲಿ 2 ರನ್ ಬಾರಿಸಿ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

4 / 5

ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಣ ರೋಚಕ ಗೆಲುವು ದಾಖಲಿಸಿದ ದಾಖಲೆಯೊಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಯಿತು. ಅಂದರೆ WPL ನಲ್ಲಿ ಯಾವುದೇ ತಂಡ ಕೊನೆಯ ಎರಡು ವಿಕೆಟ್ ಉಳಿದಿರುವಾಗ ಗೆದ್ದ ಚರಿತ್ರೆ ಇರಲಿಲ್ಲ. ಆದರೆ ಈ ಬಾರಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು 2 ವಿಕೆಟ್​ಗಳಿಂದ ಮಣಿಸಿ ಕ್ಯಾಪಿಟಲ್ಸ್ ಪಡೆ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5

ಇದಕ್ಕೂ ಮುನ್ನ 2023 ರಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ 2 ಬಾರಿ 3 ವಿಕೆಟ್​ಗಳ ಅಂತರದಿಂದ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿದ್ದರು. ಇದೀಗ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 2 ವಿಕೆಟ್​ಗಳ ಅಂತರದಿಂದ ವಿಜಯಮಾಲೆಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ವಿಕೆಟ್​ಗಳ ಅಂತರದಲ್ಲಿ ರೋಚಕ ಗೆಲುವು ದಾಖಲಿಸಿದ ತಂಡ ಎನಿಸಿಕೊಂಡಿದೆ.

Loading...
Unable to load recommendations.
Follow Us