AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಎಲ್ಲಿ?

Vijay Hazare Trophy 2025: ಡಿಸೆಂಬರ್ 24 ರಂದು ಶುರುವಾಗಲಿರುವ ದೆಹಲಿ ಮತ್ತು ಆಂಧ್ರ ಪ್ರದೇಶ್ ನಡುವಣ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಮೂಲಕ ಕೊಹ್ಲಿ 15 ವರ್ಷಗಳ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಅವರು 2010 ರಲ್ಲಿ ಕೊನೆಯ ಬಾರಿ ದೇಶೀಯ ಏಕದಿನ ಪಂದ್ಯವಾಡಿದ್ದರು.

ಝಾಹಿರ್ ಯೂಸುಫ್
|

Updated on: Dec 24, 2025 | 7:53 AM

Share
ವಿಜಯ ಹಝಾರೆ ಟೂರ್ನಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಮೊದಲ ದಿನವೇ 32 ತಂಡಗಳು ಕೂಡ ಕಣಕ್ಕಿಳಿಯಲಿವೆ. ಈ ಮೂವತ್ತೆರಡು ತಂಡಗಳಲ್ಲಿ ಎಲ್ಲರ ಕಣ್ಣು ನೆಟ್ಟಿರುವುದು ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದ ಮೇಲೆ. ಏಕೆಂದರೆ ಈ ಮ್ಯಾಚ್ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಜಯ ಹಝಾರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ.

1 / 5
ಅಂದರೆ ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು. ಇದೀಗ ದಶಕಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಬ್ಯಾಟ್ ಬೀಸಲು ಸಜ್ಜಾಗಿದ್ದಾರೆ.

2 / 5
ಆದರೆ ಈ ಮ್ಯಾಚ್ ನಡೆಯುವುದು ಎಲ್ಲಿ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿಗದಿಯಾಗಿದ್ದ ಈ ಪಂದ್ಯವನ್ನು ಸುರಕ್ಷತಾ ಕಾರಣಗಳಿಂದಾಗಿ ಸ್ಥಳಾಂತರ ಮಾಡಲಾಗಿದೆ. ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಪಂದ್ಯಗಳನ್ನು ಆಯೋಜಿಸಲಾಗಿಲ್ಲ.

3 / 5
ಇದಾಗ್ಯೂ ಈ ಬಾರಿಯ ವಿಜಯ ಹಝಾರೆ ಟೂರ್ನಿಯ ಮೂಲಕ ಮತ್ತೆ ಪಂದ್ಯ ಆಯೋಜಿಸಲು ಕೆಎಸ್​ಸಿಎ ಮುಂದಾಗಿತ್ತು. ಅದರಂತೆ ಸೋಮವಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಈ ಪರಿಶೀಲನೆಯ ವರದಿಯು ನಕಾರತ್ಮಕವಾಗಿದ್ದ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ದೆಹಲಿ-ಆಂಧ್ರ ನಡುವಣ ಪಂದ್ಯ ಆಯೋಜಿಸಲು ಅನುಮತಿ ನಿರಾಕರಿಸಿದ್ದರು.

4 / 5
ಇದೀಗ ಈ ಮ್ಯಾಚ್ ಅನ್ನು ಬೆಂಗಳೂರಿನ ಬಂಡೆ ಕೊಡಿಗೆಹಳ್ಳಿಯಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸ್​ಲೆನ್ಸ್ ನಲ್ಲಿರುವ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಇಂದು ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯ ಪಂದ್ಯಕ್ಕಾಗಿ ಸೆಂಟರ್ ಆಫ್ ಎಕ್ಸ್​ಲೆನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ ಎಂಬುದು ವಿಶೇಷ.

5 / 5