
ಭಾರತ ಮತ್ತು ಶ್ರೀಲಂಕಾ ನಡುವೆ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ, ಭಾರತದ ಯುವ ಎಡಗೈ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ತಮ್ಮ ಶ್ರೇಷ್ಠ ಬ್ಯಾಟಿಂಗ್ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಪಡಿಕ್ಕಲ್ ಶ್ರೀಲಂಕಾದ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ 230 ಎಸೆತಗಳಲ್ಲಿ 167 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು(PC-PTI).

ಪಂದ್ಯದ ಮೊದಲ ದಿನದಂದು 131 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಪಡಿಕ್ಕಲ್, ಎರಡನೇ ದಿನದಂದು ತಮ್ಮ ರನ್ಳ ಖಾತೆಗೆ 36 ರನ್ ಸೇರಿಸಿ ವಿಕೆಟ್ ಒಪ್ಪಿಸಿದರು. ಎರಡನೇ ದಿನ ಮಳೆಯಿಂದಾಗಿ ಆಟ ತಡವಾಗಿ ಆರಂಭವಾಯಿತು. ಅಲ್ಲದೆ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚಿನ ನೆರವು ನೀಡಿತು. ಇದರ ನಡುವೆಯೂ ಪಡಿಕ್ಕಲ್ ತಮ್ಮ ಇನ್ನಿಂಗ್ಸ್ನಲ್ಲಿ 15 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸುವ ಮೂಲಕ ಅನೇಕ ದಾಖಲೆಗಳನ್ನು ಸೃಷ್ಟಿಸಿದರು(PC-PTI).

ಟೆಸ್ಟ್ ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 150 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸುವುದು ವಿಶೇಷ. ಈ ವಿಶೇಷ ಕ್ಲಬ್‌ಗೆ ಸೇರಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಪಡಿಕ್ಕಲ್. 2009 ರಲ್ಲಿ ಅಹಮದಾಬಾದ್‌ನಲ್ಲಿ ಇದೇ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ರಾಹುಲ್ ದ್ರಾವಿಡ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 177 ರನ್ ಕಲೆಹಾಕಿದ್ದರು(PC-PTI).

ಆ ನಂತರ 2017 ರಲ್ಲಿ ಗಾಲೆಯಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಇದೇ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 153 ರನ್ ಕಲೆಹಾಕಿದ್ದರು. ಈಗ, ಒಂಬತ್ತು ವರ್ಷಗಳ ನಂತರ, ದೇವದತ್ ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಈ ಸಾಧನೆ ಮಾಡಿದ್ದಾರೆ(PC-PTI).

ಪಡಿಕ್ಕಲ್ ಅವರ 167 ರನ್‌ಗಳ ಇನ್ನಿಂಗ್ಸ್ ಶ್ರೀಲಂಕಾ ನೆಲದಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಗಳಿಸಿದ ನಾಲ್ಕನೇ ಅತ್ಯಧಿಕ ಟೆಸ್ಟ್ ಸ್ಕೋರ್ ಆಗಿದೆ. ಈ ಪಟ್ಟಿಯಲ್ಲಿ ಶಿಖರ್ ಧವನ್ (190 ರನ್), ವೀರೇಂದ್ರ ಸೆಹ್ವಾಗ್ (201 ರನ್) ಮತ್ತು ಸಚಿನ್ ತೆಂಡೂಲ್ಕರ್ (203 ರನ್) ಮಾತ್ರ ದೇವದತ್ ಪಡಿಕ್ಕಲ್‌ಗಿಂತ ಮುಂದಿದ್ದಾರೆ(PC-PTI).