AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

412 ರನ್​ಗಳ ಬೃಹತ್ ಗುರಿ; 147 ರನ್​ ಸಿಡಿಸಿದ ದೇವದತ್ ಪಡಿಕ್ಕಲ್

Devdutt Padikkal century: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಮತ್ತು ಜಾರ್ಖಂಡ್ ನಡುವಿನ ರೋಚಕ ಪಂದ್ಯದಲ್ಲಿ ಇಶಾನ್ ಕಿಶನ್ (125) ಭರ್ಜರಿ ಶತಕದ ನೆರವಿನಿಂದ ಜಾರ್ಖಂಡ್ 412 ರನ್ ಗಳಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಕರ್ನಾಟಕದ ದೇವದತ್ ಪಡಿಕ್ಕಲ್ (147) ಮತ್ತು ಮಯಾಂಕ್ ಅಗರ್ವಾಲ್ (54) ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಹಮದಾಬಾದ್‌ನಲ್ಲಿ ನಡೆದ ಈ ಹೈ ಸ್ಕೋರಿಂಗ್ ಪಂದ್ಯ ಕ್ರಿಕೆಟ್ ಅಭಿಮಾನಿಗಳನ್ನು ಆಕರ್ಷಿಸಿದೆ.

ಪೃಥ್ವಿಶಂಕರ
|

Updated on: Dec 24, 2025 | 5:19 PM

Share
ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಹಾಗೂ ಜಾರ್ಖಂಡ್ ತಂಡಗಳು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜಾರ್ಖಂಡ್ ತಂಡ ಬರೋಬ್ಬರಿ 412 ರನ್ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಕರ್ನಾಟಕ ಕೂಡ ಸವಾಲಿನ ಪ್ರದರ್ಶನ ನೀಡುತ್ತಿದೆ.

1 / 5
ಕರ್ನಾಟಕ ಪರ ಯುವ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ನಾಯಕ ಮಯಾಂಕ್ ಅಗರ್ವಾಲ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ದೇವದತ್ ಪಡಿಕ್ಕಲ್ ತಮ್ಮ ಇನ್ನಿಂಗ್ಸ್​ನಲ್ಲಿ 118 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಹಿತ 147 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

2 / 5
ಇದು ಮಾತ್ರವಲ್ಲದೆ ಮೊದಲ ವಿಕೆಟ್​ಗೆ ದೇವದತ್ ಪಡಿಕ್ಕಲ್ ಹಾಗೂ ಮಯಾಂಕ್ ಅಗರ್ವಾಲ್ 114 ರನ್​ಗಳ ಭರ್ಜರಿ ಜೊತೆಯಾಟವನ್ನು ನೀಡಿದರು. ಇವರಿಬ್ಬರು ಕೇವಲ 11.5 ಓವರ್​ಗಳಲ್ಲಿ ತಂಡವನ್ನು ಇಷ್ಟು ಮೊತ್ತಕ್ಕೆ ಕೊಂಡೊಯ್ದಿದ್ದು, ಇವರಿಬ್ಬರ ಸ್ಫೋಟಕ ಆಟಕ್ಕೆ ಸಾಕ್ಷಿಯಾಗಿದೆ.

3 / 5
ದೇವದತ್ ಮಾತ್ರವಲ್ಲದೆ ನಾಯಕ ಮಯಾಂಕ್ ಕೂಡ 54 ರನ್​ಗಳ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 34 ಎಸೆತಗಳನ್ನು ಎದುರಿಸಿದ ಮಯಾಂಕ್ 10 ಬೌಂಡರಿ ಕೂಡ ಬಾರಿಸಿದರು. ಇವರಿಬ್ಬರ ಈ ಜೊತೆಯಾಟದಿಂದಾಗಿ ಕರ್ನಾಟಕ ತಂಡ ಬೃಹತ್ ಗುರಿಯನ್ನು ಬೆನ್ನಟ್ಟುವತ್ತ ಹೆಜ್ಜೆ ಇಟ್ಟಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಕರ್ನಾಟಕ ತಂಡಕ್ಕೆ 42 ಎಸೆತಗಳಲ್ಲಿ 63 ರನ್ ಬೇಕಿದೆ.

4 / 5
ಇನ್ನು ಇದೇ ಪಂದ್ಯದಲ್ಲಿ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ಕೂಡ ಕರ್ನಾಟಕದ ವಿರುದ್ಧ ಸ್ಫೋಟಕ ಶತಕ ಸಿಡಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 39 ಎಸೆತಗಳನ್ನು ಎದುರಿಸಿದ ಕಿಶನ್ 7 ಬೌಂಡರಿ ಹಾಗೂ 14 ಭರ್ಜರಿ ಸಿಕ್ಸರ್​ಗಳ ಸಹಿತ 125 ರನ್ ಬಾರಿಸಿದರು. ಕಿಶನ್ ಶತಕದಿಂದಾಗಿ ಜಾರ್ಖಂಡ್ ತಂಡ ಕರ್ನಾಟಕದ ಮುಂದೆ 412 ರನ್​ಗಳ ಬೃಹತ್ ರನ್ ಕಲೆಹಾಕಿದೆ.

5 / 5
ಬಿಗ್ ಬಾಸ್: ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ

ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ

ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ

ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ