AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಪರ ಕನ್ನಡಿಗ ಕಣಕ್ಕೆ..!

India vs England: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಈ ಮೂಲಕ ಕೊನೆಯ ಪಂದ್ಯಕ್ಕೂ ಮುನ್ನವೇ ಭಾರತ ತಂಡ ಸರಣಿ ಗೆದ್ದುಕೊಂಡಿದೆ.

TV9 Web
| Edited By: |

Updated on: Feb 29, 2024 | 11:19 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯುವ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal) ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೂಲಕ ದೇವದತ್ ಭಾರತ ಪರ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

1 / 6
ಕಳೆದ ಮೂರು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರಜತ್ ಪಾಟಿದಾರ್ 6 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 63 ರನ್​ಗಳು ಮಾತ್ರ. ಹೀಗಾಗಿ 5ನೇ ಟೆಸ್ಟ್ ಪಂದ್ಯದಿಂದ ಪಾಟಿದಾರ್ ಅವರನ್ನು ಕೈ ಬಿಡಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 6
ರಜತ್ ಪಾಟಿದಾರ್ ಬದಲಿಗೆ 5ನೇ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್​ಗೆ ಅವಕಾಶ ಸಿಗುವುದು ಬಹುತೇಕ ಖಚಿತ ಎನ್ನಲಾಗಿದ್ದು, ಅದರಂತೆ ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಕನ್ನಡಿಗ ಟೀಮ್ ಇಂಡಿಯಾ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

3 / 6
ವಿಶೇಷ ಎಂದರೆ ದೇವದತ್ ಪಡಿಕ್ಕಲ್ ಇದೇ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ 3ನೇ ಟೆಸ್ಟ್ ಪಂದ್ಯದ ವೇಳೆ ಪಡಿಕ್ಕಲ್​ಗೆ ಬುಲಾವ್ ನೀಡಲಾಗಿತ್ತು. ಇದೀಗ ಮೊದಲ ಆಯ್ಕೆಯಲ್ಲೇ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಅವಕಾಶ ಯುವ ಎಡಗೈ ದಾಂಡಿಗನಿಗೆ ಒದಗಿ ಬರಲಿದೆ.

4 / 6
ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 31 ಪಂದ್ಯಗಳನ್ನಾಡಿರುವ ದೇವದತ್ ಪಡಿಕ್ಕಲ್ ಇದುವರೆಗೆ 2227 ರನ್ ಕಲೆಹಾಕಿದ್ದಾರೆ. ಈ ವೇಳೆ 6 ಶತಕ ಹಾಗೂ 12 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಕೂಡ ಕನ್ನಡಿಗನಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್, ದೇವದತ್ ಪಡಿಕ್ಕಲ್.

6 / 6
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್

‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ

ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ

ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ

ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!

ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ

ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ

ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ