AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devdutt Padikkal: ರವಿಚಂದ್ರನ್ ಅಶ್ವಿನ್ ಔಟ್: ದೇವದತ್ ಪಡಿಕ್ಕಲ್ ಇನ್

India vs England 3rd Test: ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಭಾರತದ ಪರ ಸಬ್​ಟ್ಯೂಟ್ ಫೀಲ್ಡರ್ ಆಗಿ ಕರ್ನಾಟಕದ ಆಟಗಾರ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 17, 2024 | 10:24 AM

Share
ರಾಜ್​ಕೋಟ್​ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಿಂದ ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಿಂದೆ ಸರಿದಿದ್ದಾರೆ.

1 / 7
ವೈಯುಕ್ತಿಕ ಕಾರಣಗಳಿಂದಾಗಿ ಅಶ್ವಿನ್ 3ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು, ಈಗಾಗಲೇ ಚೆನ್ನೈಗೆ ತಲುಪಿದ್ದಾರೆ. ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ದಿಢೀರ್ ತಂಡವನ್ನು ತೊರೆದಿದ್ದಾರೆ ಎಂದು ತಿಳಿದು ಬಂದಿದೆ.

2 / 7
ಅದರಂತೆ ಇದೀಗ ರವಿಚಂದ್ರನ್ ಅಶ್ವಿನ್ ಬದಲಿಗೆ ಸಬ್ಸ್​ಟ್ಯೂಟ್ ಫೀಲ್ಡರ್ ಆಗಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ವಿಶೇಷ ಎಂದರೆ ಪಡಿಕ್ಕಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಕಣಕ್ಕಿಳಿಯುತ್ತಿರುವುದು ಇದೇ ಮೊದಲ ಬಾರಿಗೆ. ಈ ಹಿಂದೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಪಡಿಕ್ಕಲ್ ಇದೀಗ ರೆಡ್ ಬಾಲ್ ಕ್ರಿಕೆಟ್​ನಲ್ಲೂ ಕಣಕ್ಕಿಳಿದಿದ್ದಾರೆ.

3 / 7
ಅಂದಹಾಗೆ ದೇವದತ್ ಪಡಿಕ್ಕಲ್ ಮೂರನೇ ಟೆಸ್ಟ್ ಪಂದ್ಯಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಬದಲಿಗೆ ಪಡಿಕ್ಕಲ್​ಗೆ ಸ್ಥಾನ ನೀಡಲಾಗಿದೆ. ಅದರಂತೆ ಇದೀಗ ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಫೀಲ್ಡಿಂಗ್ ಮಾಡಲು ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.

4 / 7
ಇದಾಗ್ಯೂ ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್​ಗೆ ಬ್ಯಾಟಿಂಗ್ ಅಥವಾ ಬೌಲಿಂಗ್ ಮಾಡಲು ಅವಕಾಶ ಇರುವುದಿಲ್ಲ. ಏಕೆಂದರೆ ಐಸಿಸಿ ನಿಯಮದ ಪ್ರಕಾರ ಕೋವಿಡ್ ಕಾರಣ ಅಥವಾ ಗಾಯದ ಕಾರಣ ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದರೆ ಮಾತ್ರ ಬದಲಿ ಆಟಗಾರ ತಂಡದ ಪರ ಆಡಬಹುದು.

5 / 7
ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆದಿರುವ ದೇವದತ್ ಪಡಿಕ್ಕಲ್ ಕೇವಲ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

6 / 7
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ. ದೇವದತ್ ಪಡಿಕ್ಕಲ್ (ಸಬ್)

7 / 7
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?