Devdutt Padikkal: ರವಿಚಂದ್ರನ್ ಅಶ್ವಿನ್ ಔಟ್: ದೇವದತ್ ಪಡಿಕ್ಕಲ್ ಇನ್
TV9 Web | Updated By: ಝಾಹಿರ್ ಯೂಸುಫ್
Updated on:
Feb 17, 2024 | 10:24 AM
India vs England 3rd Test: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಭಾರತದ ಪರ ಸಬ್ಟ್ಯೂಟ್ ಫೀಲ್ಡರ್ ಆಗಿ ಕರ್ನಾಟಕದ ಆಟಗಾರ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.
1 / 7
ರಾಜ್ಕೋಟ್ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಿಂದ ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಿಂದೆ ಸರಿದಿದ್ದಾರೆ.
2 / 7
ವೈಯುಕ್ತಿಕ ಕಾರಣಗಳಿಂದಾಗಿ ಅಶ್ವಿನ್ 3ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು, ಈಗಾಗಲೇ ಚೆನ್ನೈಗೆ ತಲುಪಿದ್ದಾರೆ. ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ದಿಢೀರ್ ತಂಡವನ್ನು ತೊರೆದಿದ್ದಾರೆ ಎಂದು ತಿಳಿದು ಬಂದಿದೆ.
3 / 7
ಅದರಂತೆ ಇದೀಗ ರವಿಚಂದ್ರನ್ ಅಶ್ವಿನ್ ಬದಲಿಗೆ ಸಬ್ಸ್ಟ್ಯೂಟ್ ಫೀಲ್ಡರ್ ಆಗಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ವಿಶೇಷ ಎಂದರೆ ಪಡಿಕ್ಕಲ್ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಕಣಕ್ಕಿಳಿಯುತ್ತಿರುವುದು ಇದೇ ಮೊದಲ ಬಾರಿಗೆ. ಈ ಹಿಂದೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಪಡಿಕ್ಕಲ್ ಇದೀಗ ರೆಡ್ ಬಾಲ್ ಕ್ರಿಕೆಟ್ನಲ್ಲೂ ಕಣಕ್ಕಿಳಿದಿದ್ದಾರೆ.
4 / 7
ಅಂದಹಾಗೆ ದೇವದತ್ ಪಡಿಕ್ಕಲ್ ಮೂರನೇ ಟೆಸ್ಟ್ ಪಂದ್ಯಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಬದಲಿಗೆ ಪಡಿಕ್ಕಲ್ಗೆ ಸ್ಥಾನ ನೀಡಲಾಗಿದೆ. ಅದರಂತೆ ಇದೀಗ ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಫೀಲ್ಡಿಂಗ್ ಮಾಡಲು ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.
5 / 7
ಇದಾಗ್ಯೂ ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ಗೆ ಬ್ಯಾಟಿಂಗ್ ಅಥವಾ ಬೌಲಿಂಗ್ ಮಾಡಲು ಅವಕಾಶ ಇರುವುದಿಲ್ಲ. ಏಕೆಂದರೆ ಐಸಿಸಿ ನಿಯಮದ ಪ್ರಕಾರ ಕೋವಿಡ್ ಕಾರಣ ಅಥವಾ ಗಾಯದ ಕಾರಣ ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದರೆ ಮಾತ್ರ ಬದಲಿ ಆಟಗಾರ ತಂಡದ ಪರ ಆಡಬಹುದು.
6 / 7
ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆದಿರುವ ದೇವದತ್ ಪಡಿಕ್ಕಲ್ ಕೇವಲ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.
7 / 7
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ. ದೇವದತ್ ಪಡಿಕ್ಕಲ್ (ಸಬ್)