AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6: ಸ್ಫೋಟಕ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

Syed Mushtaq Ali Trophy 2025: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್ ಡಿ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಕರ್ನಾಟಕ ಪರ ದೇವದತ್ ಪಡಿಕ್ಕಲ್ ಶತಕ ಸಿಡಿಸಿದ್ದು, ಈ ಮೂಲಕ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ.

ಝಾಹಿರ್ ಯೂಸುಫ್
|

Updated on: Dec 02, 2025 | 11:26 AM

Share
ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಮುಖಾಮುಖಿಯಾಗಿವೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ತಮಿಳುನಾಡು ತಂಡದ ನಾಯಕ ವರುಣ್ ಚಕ್ರವರ್ತಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ಮಯಾಂಕ್ ಅಗರ್ವಾಲ್ (24) ಹಾಗೂ ಶರತ್ ಬಿಆರ್​ (53) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ದೇವದತ್ ಪಡಿಕ್ಕಲ್ ತಮಿಳುನಾಡು ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಪಡಿಕ್ಕಲ್ ಬ್ಯಾಟ್​ನಿಂದ 6 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳು ಮೂಡಿಬಂದವು. ಈ ಮೂಲಕ ಕೇವಲ 45 ಎಸೆತಗಳಲ್ಲಿ ಶತಕ ಪೂರೈಸಿದರು.

3 / 5
ಅಂತಿಮವಾಗಿ 46 ಎಸೆತಗಳನ್ನು ಎದುರಿಸಿದ ದೇವದತ್ ಪಡಿಕ್ಕಲ್ 10 ಫೋರ್ ಹಾಗೂ 6 ಸಿಕ್ಸ್​ಗಳೊಂದಿಗೆ ಅಜೇಯ 102 ರನ್ ಬಾರಿಸಿದರು. ಪಡಿಕ್ಕಲ್ ಅವರ ಈ ವಿಸ್ಫೋಟಕ ಸೆಂಚುರಿ ನೆರವಿನೊಂದಿಗೆ ಕರ್ನಾಟಕ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿದೆ.

4 / 5
ಅಂದಹಾಗೆ ಇದು ಟಿ20 ಕ್ರಿಕೆಟ್​ನಲ್ಲಿ ದೇವದತ್ ಪಡಿಕ್ಕಲ್ ಅವರ 4ನೇ ಶತಕ. ಇದಕ್ಕೂ ಮುನ್ನ ಆರಂಭಿಕನಾಗಿ ಎರಡು ಸೆಂಚುರಿಗಳನ್ನು ಸಿಡಿಸಿದ್ದರು. ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒಂದು ಶತಕ ಬಾರಿಸಿದ್ದರು. ಇದೀಗ ಮೂರನೇ ಕ್ರಮಾಂಕದಲ್ಲೂ ಬ್ಯಾಟ್ ಬೀಸಿ ಮೂರಂಕಿ ರನ್​ಗಳಿಸಲು ಯಶಸ್ವಿಯಾಗಿದ್ದಾರೆ.

5 / 5
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್

ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ

ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ

ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ