AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

Devdutt Padikkal: ದೇವದತ್ ಪಡಿಕ್ಕಲ್ ಚೊಚ್ಚಲ ದ್ವಿಶತಕ ಸಿಡಿಸಿದ್ದಾರೆ. ಅದು ಕೂಡ ನಿರ್ಣಾಯಕ ಪಂದ್ಯದಲ್ಲಿ ಎಂಬುದು ವಿಶೇಷ. ಉತ್ತರಾಖಂಡ್ ವಿರುದ್ಧ  ನಡೆಯುತ್ತಿರುವ ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಡಿಕ್ಕಲ್ 232 ರನ್​ಗಳ ಅಮೋಘ ಇನಿಂಗ್ಸ್ ಆಡಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 16, 2026 | 12:26 PM

Share
ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರಾಖಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆದಿರಲಿಲ್ಲ. ಕೆಎಲ್ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕ್ರೀಸ್ ಗೆ ಆಗಮಿಸಿದ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಕೆಎಲ್ ರಾಹುಲ್ ಜೊತೆಗೂಡಿ ಇನಿಂಗ್ಸ್ ಕಟ್ಟಿದ ದೇವದತ್ ಪಡಿಕ್ಕಲ್ 2ನೇ ವಿಕೆಟ್‌ಗೆ 278 ರನ್ ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 211 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್ ಗಳೊಂದಿಗೆ 141 ರನ್ ಬಾರಿಸಿದ್ದ ಕೆಎಲ್ ರಾಹುಲ್ ಔಟಾದರು.

3 / 5
ಮತ್ತೊಂದೆಡೆ ಜವಾಬ್ದಾರಿಯುತ ಇನಿಂಗ್ಸ್ ಮುಂದುವರೆಸಿದ ದೇವದತ್ ಪಡಿಕ್ಕಲ್ 288 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ದ್ವಿಶತಕದ ಬೆನ್ನಲ್ಲೇ ಬಿರುಸಿನ ಬ್ಯಾಟಿಂಗ್ ಗೆ ಮುಂದಾದ ಪಡಿಕ್ಕಲ್ 330 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 29 ಫೋರ್ ಗಳೊಂದಿಗೆ 232 ರನ್ ಬಾರಿಸಿ ಔಟಾದರು.

4 / 5
ದೇವದತ್ ಪಡಿಕ್ಕಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನೊಂದಿಗೆ ಕರ್ನಾಟಕ ತಂಡ 121 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 501 ರನ್ ಕಲೆಹಾಕಿದೆ. ಇದೀಗ ಸ್ಮರಣ್ ರವಿಚಂದ್ರನ್ ಹಾಗೂ ಕೃತಿಕ್ ಕೃಷ್ಣ ಬ್ಯಾಟಿಂಗ್ ಮುಂದುವರೆಸಿದ್ದು, ಕರ್ನಾಟಕ ಬೃಹತ್ ಮೊತ್ರ ಪೇರಿಸಿ ದ್ವಿತೀಯ ದಿನದಾಟದಲ್ಲೇ ಡಿಕ್ಲೇರ್ ಘೋಷಿಸುವ ಸಾಧ್ಯತೆಯಿದೆ.

5 / 5
Follow Us
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!

ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು

ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್