AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಇತಿಹಾಸದಲ್ಲೇ ಇಂತಹದೊಂದು ವಿಶ್ವ ದಾಖಲೆ ಬರೆದಿರುವುದು ಇವರಿಬ್ಬರೇ..!

New Zealand vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆವೊನ್ ಕಾನ್ವೆ ದ್ವಿಶತಕ ಸಿಡಿಸಿದರೆ, ಟಾಮ್ ಲ್ಯಾಥಮ್ ಶತಕ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 575 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ವೆಸ್ಟ್ ಇಂಡೀಸ್ 420 ರನ್ ಗಳಿಸಿದೆ. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ನ್ಯೂಝಿಲೆಂಡ್ 306 ರನ್​ ಬಾರಿಸಿ ಡಿಕ್ಲೇರ್ ಘೋಷಿಸುವ ಮೂಲಕ ವಿಂಡೀಸ್ ಪಡೆಗೆ ಕಠಿಣ ಗುರಿ ನೀಡಿದೆ.

ಝಾಹಿರ್ ಯೂಸುಫ್
|

Updated on: Dec 22, 2025 | 6:55 AM

Share
ಟೆಸ್ಟ್ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. ಈ ನೂರ ನಲವತ್ತೆಂಟು ವರ್ಷಗಳಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ ನ್ಯೂಝಿಲೆಂಡ್ ತಂಡದ ಆರಂಭಿಕರಾದ ಡೆವೊನ್ ಕಾನ್ವೆ (Devon Conway) ಹಾಗೂ ಟಾಮ್ ಲ್ಯಾಥಮ್ (Tom Latham).

1 / 5
ಮೌಂಟ್​ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಡೆವೊನ್ ಕಾನ್ವೆ ಹಾಗೂ ಟಾಮ್ ಲ್ಯಾಥಮ್ ಭರ್ಜರಿ ಸೆಂಚುರಿಗಳನ್ನು ಸಿಡಿಸಿದ್ದಾರೆ. ಅದು ಕೂಡ ಎರಡೂ ಇನಿಂಗ್ಸ್​ಗಳಲ್ಲಿ ಎಂಬುದು ವಿಶೇಷ.

2 / 5
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆವೊನ್ ಕಾನ್ವೆ 227 ರನ್ ಬಾರಿಸಿದರೆ, ಟಾಮ್ ಲ್ಯಾಥಮ್ 137 ರನ್​ ಸಿಡಿಸಿದ್ದರು. ಅಲ್ಲದೆ ಮೊದಲ ವಿಕೆಟ್​ಗೆ 323 ರನ್​ಗಳ ಜೊತೆಯಾಟವನ್ನಾಡಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟಾಮ್ ಲ್ಯಾಥಮ್ 101 ರನ್​ ಕಲೆಹಾಕಿದರೆ, ಡೆವೊನ್ ಕಾನ್ವೆ 100 ರನ್ ಬಾರಿಸಿದ್ದಾರೆ. 

3 / 5
ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಎರಡೂ ಇನಿಂಗ್ಸ್​ಗಳಲ್ಲೂ ಶತಕ ಸಿಡಿಸಿದ ವಿಶ್ವದ ಮೊದಲ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ. ಅಂದರೆ ಟೆಸ್ಟ್​ನಲ್ಲಿ ಯಾವುದೇ ಆರಂಭಿಕ ಜೋಡಿ ಎರಡೂ ಇನಿಂಗ್ಸ್​ಗಳಲ್ಲಿ ಸೆಂಚುರಿ ಬಾರಿಸಿದ ನಿದರ್ಶನವಿರಲಿಲ್ಲ.

4 / 5
ಇದೀಗ 147 ವರ್ಷಗಳ ಬಳಿಕ ಡೆವೊನ್ ಕಾನ್ವೆ ಹಾಗೂ ಟಾಮ್ ಲ್ಯಾಥಮ್ ಟೆಸ್ಟ್ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿಗಳನ್ನು ಸಿಡಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಎರಡೂ ಇನಿಂಗ್ಸ್​ಗಳಲ್ಲೂ ಶತಕ ಬಾರಿಸಿದ ವಿಶ್ವದ ಮೊದಲ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ