MS Dhoni: ವಾರವಿಡೀ ಹಲವು ಪರೀಕ್ಷೆ; ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ಆಸ್ಪತ್ರೆಗೆ ತೆರಳಿದ ಧೋನಿ!

|

Updated on: May 31, 2023 | 10:57 AM

Dhoni Knee Injury: ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಮಾಡಿದ ಬೆನ್ನಲ್ಲೇ ಎಂಎಸ್ ಧೋನಿ ಮುಂಬೈನ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

1 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಮಾಡಿದ ಬೆನ್ನಲ್ಲೇ ಎಂಎಸ್ ಧೋನಿ ಮುಂಬೈನ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಡೀ ಐಪಿಎಲ್​ನಲ್ಲಿ ಧೋನಿ ತಮ್ಮ ಮೊಣಕಾಲು ನೋವಿನಿಂದ ಬಳಲುತ್ತಿದ್ದ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಇದೀಗ ಆಸ್ಪತ್ರೆಗೆ ತೆರಳಿದ್ದಾರೆ.

2 / 5
ಐಪಿಎಲ್ 2023 ರಲ್ಲಿ, ಮೊದಲ ಪಂದ್ಯದಲ್ಲಿಯೇ ಧೋನಿ ಮೊಣಕಾಲು ಗಾಯಕ್ಕೆ ತುತ್ತಾದರು. ಆದರೆ ಮೊದಲ ಬಾರಿಗೆ ಇದು ಎಲ್ಲರ ಕಣ್ಣಿಗೆ ಬಿದ್ದಿದ್ದು ಏಪ್ರಿಲ್ 12 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ. ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಮತ್ತು ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಕೂಡ ಧೋನಿ ಇಂಜುರಿಯ ಬಗ್ಗೆ ಹೇಳಿಕೆ ನೀಡಿದ್ದರು.

3 / 5
ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಧೋನಿ ಮೊಣಕಾಲಿನ ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ಧೋನಿ ಅಲ್ಲಿಯ ದಾಖಲಾಗುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ಧೋನಿ ಮೊಣಕಾಲಿನ ಗಾಯದ ತೀವ್ರತೆಯ ಬಗ್ಗೆ ತಿಳಿಯಲು ಈ ವಾರ ಅದೇ ಆಸ್ಪತ್ರೆಯಲ್ಲಿ ಹಲವಾರು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ ಎಂದು ವರದಿಗಳಲ್ಲಿ ಹೇಳಲಾಗುತ್ತಿದೆ.

4 / 5
ವಾಸ್ತವವಾಗಿ ಹಲವು ಐಪಿಎಲ್ ಪಂದ್ಯಗಳ ಸಮಯದಲ್ಲಿ ಧೋನಿ ನಡೆಯಲು ಕಷ್ಟಪಡುತ್ತಿರುವ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದರಿಂದಾಗಿ ಧೋನಿ ವಿಕೆಟ್‌ಗಳ ನಡುವೆ ಓಡಲು ಸಮಸ್ಯೆ ಉಂಟಾಗಿತ್ತು. ಇದೇ ಕಾರಣಕ್ಕೆ ಅವರು ಕೊನೆಯಲ್ಲಿ ಬ್ಯಾಟಿಂಗ್‌ಗೆ ಬರುತ್ತಿದ್ದರು.

5 / 5
ಆದರೆ ಧೋನಿ ತಮ್ಮ ಮೊಣಕಾಲು ತಪಾಸಣೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ತೆರಳಿದ್ದರು ಎಂಬುದರ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ 200ಕ್ಕೂ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ಧೋನಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.