Team India: ಭಾರತ ಟೆಸ್ಟ್ ತಂಡಕ್ಕೆ ಇಬ್ಬರು ಹೊಸ ಆಟಗಾರರು ಎಂಟ್ರಿ
TV9 Web | Updated By: ಝಾಹಿರ್ ಯೂಸುಫ್
Updated on:
Jan 15, 2024 | 10:22 AM
India vs England Test: ಭಾರತ-ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯ ಜನವರಿ 25 ರಿಂದ ಹೈದರಾಬಾದ್ನಲ್ಲಿ ಶುರುವಾಗಲಿದೆ. ಇನ್ನು 2ನೇ ಪಂದ್ಯವು ಫೆಬ್ರವರಿ 2 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ.
1 / 6
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.
2 / 6
ವಿಶೇಷ ಎಂದರೆ ಈ ಬಾರಿ ಆಯ್ಕೆ ಮಾಡಲಾದ 16 ಸದಸ್ಯರ ಈ ತಂಡದಲ್ಲಿ ಇಬ್ಬರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಮೊಹಮ್ಮದ್ ಶಮಿ ಬದಲಿಗೆ ಯುವ ವೇಗಿ ಅವೇಶ್ ಖಾನ್ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶಮಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
3 / 6
ಹೀಗಾಗಿ ಬದಲಿ ವೇಗದ ಬೌಲರ್ ಆಗಿ ಅವೇಶ್ ಖಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಅವೇಶ್ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ಇದಾಗ್ಯೂ ಅವರಿಗೆ ಚೊಚ್ಚಲ ಬಾರಿಗೆ ಕಣಕ್ಕಿಳಿಯಲು ಅವಕಾಶ ದೊರೆತಿಲ್ಲ. ಇದೀಗ ಮತ್ತೊಮ್ಮೆ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುವಲ್ಲಿ ಅವೇಶ್ ಯಶಸ್ವಿಯಾಗಿದ್ದಾರೆ.
4 / 6
ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ಯುವ ಆಟಗಾರ ಧ್ರುವ ಜುರೇಲ್ ಚೊಚ್ಚಲ ಬಾರಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ಸೌತ್ ಆಫ್ರಿಕಾ ವಿರುದ್ಧದ ಸರಣಿ ವೇಳೆ ಹೊರಗುಳಿದ ಇಶಾನ್ ಕಿಶನ್ ಈ ಬಾರಿ ಕೂಡ ಆಯ್ಕೆಯಾಗಿಲ್ಲ. ಅವರ ಬದಲಿಗೆ 22 ವರ್ಷದ ಧ್ರುವ್ ಜುರೇಲ್ಗೆ ಸ್ಥಾನ ಕಲ್ಪಿಸಲಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಈ ಕೆಳಗಿನಂತಿರಲಿದೆ...
5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
6 / 6
ಭಾರತ-ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯ ಜನವರಿ 25 ರಿಂದ ಹೈದರಾಬಾದ್ನಲ್ಲಿ ಶುರುವಾಗಲಿದೆ. ಇನ್ನು 2ನೇ ಪಂದ್ಯವು ಫೆಬ್ರವರಿ 2 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್ಕೋಟ್ನಲ್ಲಿ ಮೂರನೇ ಪಂದ್ಯ ಆರಂಭವಾಗಲಿದೆ. ಹಾಗೆಯೇ ಫೆಬ್ರವರಿ 23 ರಿಂದ ರಾಂಚಿಯಲ್ಲಿ 4ನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಮಾರ್ಚ್ 7 ರಿಂದ ಶುರುವಾಗಲಿರುವ 5ನೇ ಪಂದ್ಯ ಧರ್ಮಶಾಲಾ ಆತಿಥ್ಯವಹಿಸಲಿದೆ.
Published On - 7:23 am, Sat, 13 January 24