ಭಾರತ ತಂಡದಿಂದ ಹೊರಬಿದ್ದ ರಿಷಭ್ ಪಂತ್: ಯುವ ಆಟಗಾರ ಆಯ್ಕೆ

Updated on: Jan 11, 2026 | 10:55 AM

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ರಿಷಭ್ ಪಂತ್ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಯುವ ಆಟಗಾರನಿಗೆ ತಂಡಕ್ಕೆ ಬುಲಾವ್ ನೀಡಲಾಗಿದೆ.

1 / 5
ಭಾರತ ಮತ್ತು ನ್ಯೂಝಿಲೆಂಡ್ (India vs New Zealand) ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ (ಜ.11) ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಹೊರಬಿದ್ದಿದ್ದಾರೆ.

2 / 5
ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ ನಡೆದ ಭಾರತ ತಂಡದ ಅಭ್ಯಾಸ ಅವಧಿಯಲ್ಲಿ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ವಿಕೆಟ್ ಕೀಪರ್ ರಿಷಭ್ ಪಂತ್ ಅವರ ಬಲ ಪಾರ್ಶ್ವದ ಹೊಟ್ಟೆಯ ಭಾಗಕ್ಕೆ ಚೆಂಡು ತಗುಲಿ ಗಾಯವಾಗಿದೆ. ಇದರಿಂದ  ಅಸ್ವಸ್ಥತೆಗೊಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

3 / 5
ವೈದ್ಯಕೀಯ ಪರೀಕ್ಷೆ ವೇಳೆ ರಿಷಭ್ ಪಂತ್ ಅವರಿಗೆ ಪಾರ್ಶ್ವ ಸ್ನಾಯು ನೋವು (ಓಬ್ಲಿಕ್ ಮಸಲ್ ಟಿಯರ್) ಇರುವುದು ಪತ್ತೆಯಾಗಿದ್ದು, ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಅವರನ್ನು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಕೈ ಬಿಡಲಾಗಿದೆ.

4 / 5
ಇನ್ನು ರಿಷಭ್ ಪಂತ್ ಬದಲಿಯಾಗಿ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಸದ್ಯ ವಿಜಯ ಹಝಾರೆ ಟೂರ್ನಿಯಲ್ಲಿ ಉತ್ತರ ಪ್ರದೇಶ್ ಪರ ಕಣಕ್ಕಿಳಿಯುತ್ತಿರುವ ಧ್ರುವ್ ಜುರೆಲ್ ಶ್ರೀಘ್ರದಲ್ಲೇ  ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

5 / 5
ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).