
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ರಿಷಭ್ ಪಂತ್ (Rishabh Pant) ಹೊರಗುಳಿಯುವುದು ಖಚಿತವಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯಗೊಂಡಿದ್ದ ಪಂತ್ ಇನ್ನೂ ಸಹ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಹೀಗಾಗಿ ವಿಂಡೀಸ್ ವಿರುದ್ಧದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಆಯ್ಕೆಯಾಗಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಜುರೆಲ್ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. ಹಾಗಾಗಿ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾನ್ಸ್ ಸಿಕ್ಕಿರಲಿಲ್ಲ.

ಇದೀಗ ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಧ್ರುವ್ ಜುರೆಲ್ಗೆ ವಹಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಜುರೆಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು.

ಹಾಗೆಯೇ ಬ್ಯಾಕಪ್ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ಎನ್. ಜಗದೀಸನ್ ಅವರನ್ನು ಆಯ್ಕೆ ಸಮಿತಿ ಪರಿಗಣಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಗಾಯಗೊಂಡ ರಿಷಭ್ ಪಂತ್ ಬದಲಿಗೆ ಜಗದೀಸನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ವಿಕೆಟ್ ಕೀಪರ್ ಬ್ಯಾಟರ್ ಆಯ್ಕೆಯಾಗಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಬಳಗ ಈ ಕೆಳಗಿನಂತಿರಲಿದೆ...

ಭಾರತ ಸಂಭಾವ್ಯ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).