Dhruv Jurel: ಧ್ರುವ್ ಜುರೇಲ್ ಮಿಂಚಿಂಗ್: ಚೊಚ್ಚಲ ಶತಕ ಜಸ್ಟ್ ಮಿಸ್
TV9 Web | Updated By: ಝಾಹಿರ್ ಯೂಸುಫ್
Updated on:
Feb 25, 2024 | 12:03 PM
India vs England 4th Test: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 307 ರನ್ಗಳಿಗೆ ಆಲೌಟ್ ಆಗಿದೆ. ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೋ ರೂಟ್ ಅಜೇಯ ಶತಕ ಬಾರಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಇಂಗ್ಲೆಂಡ್ ಮೊದಲ ಇನಿಂಗ್ಸ್ನಲ್ಲಿ 353 ರನ್ ಕಲೆಹಾಕಿದೆ.
1 / 6
ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ (Dhruv Jurel) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 353 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.
2 / 6
ಆರಂಭಿಕ ಆಟಗಾರ ರೋಹಿತ್ ಶರ್ಮಾ (2) ಬೇಗನೆ ಔಟಾದರೆ, ಆ ಬಳಿಕ ಬಂದ ಶುಭ್ಮನ್ ಗಿಲ್ 38 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ರಜತ್ ಪಾಟಿದಾರ್ (12) ಹಾಗೂ ಸರ್ಫರಾಝ್ ಖಾನ್ (14) ಬಂದ ವೇಗದಲ್ಲೇ ಹಿಂತಿರುಗಿದ್ದರು. ಇದಾಗ್ಯೂ ಯಶಸ್ವಿ ಜೈಸ್ವಾಲ್ 73 ರನ್ಗಳ ಕೊಡುಗೆ ನೀಡಿದ್ದರು.
3 / 6
ಕೇವಲ 171 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಮಯದಲ್ಲಿ ಕಣಕ್ಕಿಳಿದ ಧ್ರುವ್ ಜುರೇಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯ ಬ್ಯಾಟಿಂಗ್ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ಜುರೇಲ್ 2ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಆಲೌಟ್ ಆಗುವುದನ್ನು ತಡೆದರು.
4 / 6
ಇನ್ನು 3ನೇ ದಿನದಾಟದಲ್ಲಿ ಕುಲ್ದೀಪ್ ಯಾದವ್ (28) ಜೊತೆಗೂಡಿ ಇನಿಂಗ್ಸ್ ಕಟ್ಟಿದ ಧ್ರುವ್ 96 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬೆನ್ನಲ್ಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಯುವ ಬ್ಯಾಟರ್ ರನ್ ಗಳಿಕೆಯ ವೇಗವನ್ನು ಹೆಚ್ಚಿಸಿದರು.
5 / 6
ಆದರೆ 90 ರನ್ಗಳಿಸಿದ್ದ ವೇಳೆ ಟಾಮ್ ಹಾರ್ಟ್ಲಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ಧ್ರುವ್ ಜುರೇಲ್ ಕ್ಲೀನ್ ಬೌಲ್ಡ್ ಆದರು. ಈ ಮೂಲಕ ಕೇವಲ 10 ರನ್ಗಳಿಂದ ಚೊಚ್ಚಲ ಶತಕ ಪೂರೈಸುವ ಅವಕಾಶವನ್ನು ತಪ್ಪಿಸಿಕೊಂಡರು.
6 / 6
ಇನ್ನು ಧ್ರುವ್ ಜುರೇಲ್ (90) ಹಾಗೂ ಯಶಸ್ವಿ ಜೈಸ್ವಾಲ್ (73) ಅವರ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 307 ರನ್ ಕಲೆಹಾಕಿದೆ. ಇದಾಗ್ಯೂ ಪ್ರಥಮ ಇನಿಂಗ್ಸ್ನಲ್ಲಿ ಭಾರತ ತಂಡವು 46 ರನ್ಗಳ ಹಿನ್ನಡೆ ಅನುಭವಿಸಿದೆ.
Published On - 11:55 am, Sun, 25 February 24