ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಮೊದಲ ವಿಕೆಟ್ಗೆ 110 ರನ್ಗಳ ಜೊತೆಯಾಟ ನೀಡಿದರು. ಈ ವೇಳೆ ಎಂದಿನಂತೆ ಸ್ಫೋಟಕ ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧಾನ ಸರಣಿಯಲ್ಲಿ ಸತತ ಎರಡನೇ ಅರ್ಧಶತಕ ಸಿಡಿಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 47 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಸಹಿತ 53 ರನ್ ಕಲೆಹಾಕಿದರು.