IND vs WI: 53,76,115,52..; ವಿಂಡೀಸ್ ವಿರುದ್ಧ ಸಿಂಹಿಣಿಯರ ಸಿಡಿಲಬ್ಬರದ ಬ್ಯಾಟಿಂಗ್
India's Record ODI Score: ವಡೋದರಾ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 358 ರನ್ ಗಳಿಸಿ ದಾಖಲೆ ನಿರ್ಮಿಸಿದೆ. ಸ್ಮೃತಿ ಮಂಧಾನ (53), ಪ್ರತೀಕಾ ರಾವಲ್ (76), ಹರ್ಲಿನ್ ಡಿಯೋಲ್ (115) ಮತ್ತು ಜೆಮಿಮಾ ರಾಡ್ರಿಗಸ್ (52) ಅವರ ಅದ್ಭುತ ಬ್ಯಾಟಿಂಗ್ನಿಂದಾಗಿ ಟೀಂ ಇಂಡಿಯಾ ಇಷ್ಟು ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.
1 / 6
ವಡೋದರಾದ ಕೊಂಟ್ಬಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ದಾಖಲೆಯ ಮೊತ್ತ ಕಲೆಹಾಕಿದೆ. ನಿಗದಿತ 50 ಓವರ್ಗಳಲ್ಲಿ ತಂಡ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 358 ರನ್ ಕಲೆಹಾಕಿದೆ.
2 / 6
ಈ ಮೂಲಕ ಏಕದಿನದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ ಪಟ್ಟಿಯಲ್ಲಿ ಟೀಂ ಇಂಡಿಯಾ ತನ್ನದೇ ಹಳೆಯ ದಾಖಲೆಯನ್ನು ಸರಿಗಟ್ಟಿದೆ. ವಾಸ್ತವವಾಗಿ 2017 ರಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಇಷ್ಟೇ ಮೊತ್ತದ ಅಂದರೆ 358 ರನ್ ಕಲೆಹಾಕಿತ್ತು. ಇದು ಏಕದಿನ ಪಂದ್ಯವೊಂದರಲ್ಲಿ ಟೀಂ ಇಂಡಿಯಾ ಕಲೆಹಾಕಿರುವ ಇದುವರೆಗಿನ ಅತ್ಯಧಿಕ ಮೊತ್ತವಾಗಿದೆ.
3 / 6
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಮೊದಲ ವಿಕೆಟ್ಗೆ 110 ರನ್ಗಳ ಜೊತೆಯಾಟ ನೀಡಿದರು. ಈ ವೇಳೆ ಎಂದಿನಂತೆ ಸ್ಫೋಟಕ ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧಾನ ಸರಣಿಯಲ್ಲಿ ಸತತ ಎರಡನೇ ಅರ್ಧಶತಕ ಸಿಡಿಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 47 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಸಹಿತ 53 ರನ್ ಕಲೆಹಾಕಿದರು.
4 / 6
ಸ್ಮೃತಿ ಮಂಧಾನಗೆ ಆರಂಭದಿಂದಲೂ ಉತ್ತಮ ಸಾಥ್ ನೀಡಿದ ಯುವ ಬ್ಯಾಟರ್ ಪ್ರತೀಕಾ ರಾವಲ್ ಕೂಡ ತಮ್ಮ ಚೊಚ್ಚಲ ಏಕದಿನ ಅರ್ಧಶತಕವನ್ನು ಪೂರ್ಣಗೊಳಿಸಿದರು. ವಾಸ್ತವವಾಗಿ ವಿಂಡೀಸ್ ವಿರುದ್ಧದ ಏಕದಿನ ಸರಣಿಯೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿರುವ ಪ್ರತೀಕಾ ತನ್ನ ಎರಡನೇ ಪಂದ್ಯದಲ್ಲಿ 86 ಎಸೆತಗಳಲ್ಲಿ 10 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 76 ರನ್ ಕಲೆಹಾಕಿದರು.
5 / 6
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಹರ್ಲಿನ್ ಡಿಯೋಲ್ ಬರೋಬ್ಬರಿ 6 ವರ್ಷಗಳ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಪೂರ್ಣಗೊಳಿಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 103 ಎಸೆತಗಳನ್ನು ಎದುರಿಸಿದ ಹರ್ಲಿನ್ 16 ಬೌಂಡರಿಗಳ ಸಹಾಯದಿಂದ 115 ರನ್ಗಳ ಶತಕದ ಇನ್ನಿಂಗ್ಸ್ ಆಡಿದರು.
6 / 6
ಹಾಗೆಯೇ ಹರ್ಲಿನ್ ಡಿಯೋಲ್ಗೆ ಉತ್ತಮ ಸಾಥ್ ನೀಡಿದ ಜೆಮಿಮಾ ರಾಡ್ರಿಗಸ್ ಕೂಡ ಕೇವಲ 36 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 52 ರನ್ಗಳ ಇನ್ನಿಂಗ್ಸ್ ಆಡಿದರು. ಇದಲ್ಲದೆ ಹರ್ಲಿನ್ ಡಿಯೋಲ್ ಜೊತೆಗೆ ಶತಕದ ಜೊತೆಯಾಟ ಕೂಡ ಆಡಿದರು. ಈ ನಾಲ್ವರ ಆಟದಿಂದಾಗಿ ಟೀಂ ಇಂಡಿಯಾ 358 ರನ್ ಕಲೆಹಾಕಲು ಸಾಧ್ಯವಾಯಿತು.