Virat Kohli: ರೈಲು ಅಪಘಾತ ಸಂತ್ರಸ್ತರಿಗೆ ವಿರಾಟ್ ಕೊಹ್ಲಿ 30 ಕೋಟಿ ರೂ. ನೀಡಿದ್ರಾ? ಇಲ್ಲಿದೆ ಸತ್ಯಾಂಶ
TV9 Web | Updated By: ಝಾಹಿರ್ ಯೂಸುಫ್
Updated on:
Jun 06, 2023 | 3:56 PM
Virat Kohli News: ಈ ಹಿಂದೆ ಕೋವಿಡ್ ಸಮಯದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಜೊತೆಗೂಡಿ ಪಿಎಂ-ಕೇರ್ಸ್ ಪರಿಹಾರ ನಿಧಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು.
1 / 10
ಒಡಿಶಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 275 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರೆ, 1,175 ಮಂದಿ ಗಾಯಗೊಂಡಿದ್ದರು. ಈ ಘನ ಘೋರ ದುರಂತಕ್ಕೆ ದೇಶಾದ್ಯಂತ ಜನರು ಮಮ್ಮಲ ಮರುಗಿದ್ದಾರೆ.
2 / 10
ಈ ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಕೂಡ ಸಂತಾಸ ಸೂಚಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಕೊಹ್ಲಿ, ಒಡಿಶಾದಲ್ಲಿ ಜರುಗಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ವಿಚಲಿತನಾಗಿದ್ದೇನೆ. ತುಂಬಾ ದುಃಖವಾಯಿತು. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪಗಳು.
3 / 10
ಆ ಕುಟುಂಬ ಸದಸ್ಯರಿಗೆ ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಹಾಗೆಯೇ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ವಿರಾಟ್ ಕೊಹ್ಲಿ ಟ್ವಿಟರ್ನಲ್ಲಿ ಬರೆದುಕೊಂಡಿದ್ದರು.
4 / 10
ಇದೀಗ ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದ ಸಂತ್ರಸ್ತರಿಗೆ ವಿರಾಟ್ ಕೊಹ್ಲಿ 30 ಕೋಟಿ ರೂ. ದೇಣಿಗೆ ನೀಡಿದ್ದಾರೆ/ ಸಹಾಯಹಸ್ತ ಚಾಚುವುದಾಗಿ ಭರವಸೆ ನೀಡಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಿದೆ.
5 / 10
ಆದರೆ ಅಸಲಿಯತ್ತೇನೆಂದರೆ...ವಿರಾಟ್ ಕೊಹ್ಲಿ ಇದುವರೆಗೆ ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ವಿರಾಟ್ ಕೊಹ್ಲಿಯಾಗಲಿ ಅಥವಾ ಅವರ ಪತ್ನಿ ಅನುಷ್ಕಾ ಶರ್ಮಾ ಆಗಲಿ ಈ ಬಗ್ಗೆ ಯಾವುದೇ ಹೇಳಿಕೆಯನ್ನಾಗಲಿ ಅಥವಾ ಪ್ರಕಟಣೆಯನ್ನಾಗಲಿ ಹೊರಡಿಸಿಲ್ಲ.
6 / 10
ಹೀಗಾಗಿ ವಿರಾಟ್ ಕೊಹ್ಲಿ 30 ಕೋಟಿ ರೂ. ನೀಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಸದ್ಯ ಇಂಗ್ಲೆಂಡ್ನಲ್ಲಿರುವ ಕೊಹ್ಲಿ ದಂಪತಿ ಭಾರತಕ್ಕೆ ಮರಳಿದ ಬಳಿಕ ನೆರವಿನ ಹಸ್ತ ಚಾಚಿದರೂ ಅಚ್ಚರಿಪಡಬೇಕಿಲ್ಲ.
7 / 10
ಏಕೆಂದರೆ ಈ ಹಿಂದೆ ಕೋವಿಡ್ ಸಮಯದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಜೊತೆಗೂಡಿ ಪಿಎಂ-ಕೇರ್ಸ್ ಪರಿಹಾರ ನಿಧಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಇದಾಗ್ಯೂ ಅವರು ನೀಡಿದ ಮೊತ್ತವನ್ನು ಬಹಿರಂಗಪಡಿಸಿರಲಿಲ್ಲ.
8 / 10
ಹಾಗೆಯೇ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ "SeVVA" ಹೆಸರಿನ ಲಾಭರಹಿತ ಎನ್ಜಿಒ ನಡೆಸುತ್ತಿದ್ದು, ಈ ಮೂಲಕ ಸಾಮಾಜಿಕ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ. ಅಲ್ಲದೆ ಇದೇ ಸೇವಾ ಮೂಲಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದಾರೆ. ಹೀಗಾಗಿ ಕೊಹ್ಲಿ ದಂಪತಿ ಮುಂದಿನ ದಿನಗಳಲ್ಲಿ ರೈಲು ದುರಂತದ ಸಂತ್ರಸ್ತರ ನೆರವಿಗೆ ನಿಂತರೂ ಅಚ್ಚರಿಪಡಬೇಕಿಲ್ಲ.
9 / 10
ಇನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ರೈಲು ದುರಂತರದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
10 / 10
ಈ ಬಗ್ಗೆ ಟ್ವೀಟ್ ಮಾಡಿರುವ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್ ಸ್ಕೂಲ್ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.