100ನೇ ಪಂದ್ಯದೊಂದಿಗೆ ನಿವೃತ್ತಿ ಘೋಷಿಸಿದ ದಿಮುತ್ ಕರುಣರತ್ನೆ

|

Updated on: Feb 04, 2025 | 12:53 PM

Sri Lanka vs Australia, 2nd Test: ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಫೆಬ್ರವರಿ 10 ರಿಂದ ಶುರುವಾಗಲಿದೆ. ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಲಂಕಾ ತಂಡದ ಆರಂಭಿಕ ಬ್ಯಾಟರ್ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್​ ಕೆರಿಯರ್​ಗೆ ವಿದಾಯ ಹೇಳಲಿದ್ದಾರೆ.

1 / 5
ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ತಮ್ಮ 100ನೇ ಟೆಸ್ಟ್​ ಪಂದ್ಯದ ಮೂಲಕ ಎಂಬುದು ವಿಶೇಷ. ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ದಿಮುತ್ 100 ಟೆಸ್ಟ್ ಪಂದ್ಯಗಳ ಸಾಧನೆ ಮಾಡಲಿದ್ದಾರೆ.

2 / 5
ಈ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಕೊನೆಗೊಳಿಸಲು ದಿಮುತ್ ಕರುಣರತ್ನೆ ನಿರ್ಧರಿಸಿದ್ದಾರೆ. ಅದರಂತೆ ಫೆಬ್ರವರಿ 10 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ.

3 / 5
36 ವರ್ಷದ ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಈವರೆಗೆ 99 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 189 ಇನಿಂಗ್ಸ್ ಆಡಿರುವ ಅವರು 1 ದ್ವಿಶತಕ, 16 ಶತಕಗಳೊಂದಿಗೆ ಒಟ್ಟು 7172 ರನ್ ಕಲೆಹಾಕಿದ್ದಾರೆ. ಹಾಗೆಯೇ 39 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

4 / 5
ಇನ್ನು ಶ್ರೀಲಂಕಾ ಪರ 50 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ದಿಮುತ್ ಕರುಣರತ್ನೆ 46 ಇನಿಂಗ್ಸ್​ಗಳಿಂದ ಒಟ್ಟು 1316 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 11 ಅರ್ಧಶತಕಗಳನ್ನು ಬಾರಿಸಿದ್ದಾರೆ.

5 / 5
2011 ರಲ್ಲಿ ಶುರುವಾದ ಅಂತಾರಾಷ್ಟ್ರೀಯ ಕೆರಿಯರ್ ಅನ್ನು ದಿಮುತ್ ಕರುಣರತ್ನೆ  ಅಂತ್ಯಗೊಳಿಸಲು ನಿರ್ಧರಿಸಿದ್ದು, ಅದರಂತೆ ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಲಿದ್ದಾರೆ.

Published On - 12:53 pm, Tue, 4 February 25