AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ರಾಯಲ್ಸ್ ತಂಡಕ್ಕೆ ಡಿಕೆ ಎಂಟ್ರಿ..!

Dinesh Karthik: ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಡಿಕೆ ಹೆಸರಿನಲ್ಲಿದೆ. ಇದೀಗ ಐಪಿಎಲ್​ಗೆ ನಿವೃತ್ತಿ ಘೋಷಿಸಿರುವ ಕಾರ್ತಿಕ್ ಹೊಸ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 10, 2024 | 12:03 PM

Share
ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದ ಮೂಲಕ ನಿವೃತ್ತಿ ಘೋಷಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಬಾರಿ ಐಪಿಎಲ್​ನಲ್ಲಿ ಅಲ್ಲ ಎಂಬುದಷ್ಟೇ ವ್ಯತ್ಯಾಸ.

1 / 6
ಅಂದರೆ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಮುಂಬರುವ SA20 ಲೀಗ್​​ನಲ್ಲಿ ಪಾಲ್ಗೊಳ್ಳಲು ಡಿಕೆ ನಿರ್ಧರಿಸಿದ್ದು, ಅದರಂತೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮಾಲೀಕತ್ವದ ಪಾರ್ಲ್ ರಾಯಲ್ಸ್ ಪರ ಕಾರ್ತಿಕ್ ಮತ್ತೆ ಬ್ಯಾಟ್ ಬೀಸಲಿದ್ದಾರೆ.

2 / 6
ಐಪಿಎಲ್ ಸೀಸನ್-17ರ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದ ದಿನೇಶ್ ಕಾರ್ತಿಕ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ಆರ್​ಸಿಬಿ ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಿತ್ತು. ಇದರ ಬೆನ್ನಲ್ಲೇ ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ಅವರನ್ನು SA20 ಲೀಗ್ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಿಕೊಂಡಿತ್ತು.

3 / 6
ಅತ್ತ ಸೌತ್ ಆಫ್ರಿಕಾ ಟಿ20 ಲೀಗ್​ನ ರಾಯಭಾರಿಯಾದ ಬೆನ್ನಲ್ಲೇ ಡಿಕೆ ಅವರನ್ನು ಮನವೊಲಿಸುವಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ. ಅದರಂತೆ ಇದೀಗ ಪಾರ್ಲ್ ರಾಯಲ್ಸ್ ಪರ ಕಣಕ್ಕಿಳಿಯಲು ಒಪ್ಪಂದ ಮಾಡಿಕೊಂಡಿದ್ದು, ಮುಂಬರುವ ಸೀಸನ್​ನಲ್ಲಿ ಪಿಂಕ್ ಜೆರ್ಸಿಯಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.

4 / 6
17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್​, ಗುಜರಾತ್ ಲಯನ್ಸ್ (ಈಗಿಲ್ಲ), ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಆಡಿದ್ದರು.

5 / 6
ಇದಾಗ್ಯೂ ಅವರು ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡಿರಲಿಲ್ಲ. ಇದೀಗ ಸೌತ್ ಆಫ್ರಿಕಾ ಟಿ20 ಲೀಗ್​ ಮೂಲಕ ದಿನೇಶ್ ಕಾರ್ತಿಕ್ ಪಿಂಕ್ ಜೆರ್ಸಿ ತಂಡದ ಭಾಗವಾಗುತ್ತಿದ್ದಾರೆ. ಅಂದರೆ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್/ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿರುವ ಡಿಕೆ  ಸೌತ್ ಆಫ್ರಿಕಾದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯಲಿರುವುದು ವಿಶೇಷ.

6 / 6
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ

ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ

ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್

ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು

ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ