Dinesh Karthik: ಹೊಸ ಹುದ್ದೆಗಳೊಂದಿಗೆ RCB ತಂಡಕ್ಕೆ DK ರಿಎಂಟ್ರಿ
IPL 2025 RCB: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ ಇನಿಂಗ್ಸ್ ಅನ್ನು ಆರ್ಸಿಬಿಯೊಂದಿಗೆ ಆರಂಭಿಸುತ್ತಿರುವುದು ವಿಶೇಷ.
1 / 7
ಈ ಬಾರಿಯ IPLನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ (Dinesh Karthik) ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ರಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ.
2 / 7
ಅದರಂತೆ ಐಪಿಎಲ್ 2025 ರಲ್ಲಿ ದಿನೇಶ್ ಕಾರ್ತಿಕ್ ಆರ್ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಹುದ್ದೆಯೊಂದಿಗೆ ಮೆಂಟರ್ ಆಗಿಯೂ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಇಲ್ಲಿ ಆರ್ಸಿಬಿ ಫ್ರಾಂಚೈಸಿಯು ದಿನೇಶ್ ಕಾರ್ತಿಕ್ಗೆ ಎರಡು ಜವಾಬ್ದಾರಿ ವಹಿಸಿದೆ.
3 / 7
ಅಹದಾಬಾದ್ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದ ಬೆನ್ನಲ್ಲೇ ಆರ್ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್ನಿಂದ ನಿವೃತ್ತಿ ಘೋಷಿಸಿದ್ದರು.
4 / 7
17 ವರ್ಷಗಳ ಐಪಿಎಲ್ ಕೆರಿಯರ್ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದರಲ್ಲೂ ಆರ್ಸಿಬಿ ಪರ ಟ್ರೋಫಿ ಗೆಲ್ಲುವ ಆಸೆ ಹೊಂದಿದ್ದ ಡಿಕೆ ಅವರ ಕನಸು ಕನಸಾಗಿಯೇ ಉಳಿದಿದೆ.
5 / 7
2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಪರ ಆಡಿದ್ದರು. 2012 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಾದ ಡಿಕೆ 2014 ರಲ್ಲಿ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮರಳಿದ್ದರು. 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು.
6 / 7
2016-17 ರಲ್ಲಿ ಗುಜರಾತ್ ಲಯನ್ಸ್ (ಈ ತಂಡ ಈಗಿಲ್ಲ) ಪರ ಆಡಿದ್ದ ದಿನೇಶ್ ಕಾರ್ತಿಕ್, 2018 ರಿಂದ 2021 ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಇದಾದ ಬಳಿಕ ಆರ್ಸಿಬಿ ತಂಡಕ್ಕೆ ಮರಳಿದ್ದ ಡಿಕೆ ಐಪಿಎಲ್ 2024ರಲ್ಲಿ ಕೊನೆಯ ಪಂದ್ಯವಾಡುವ ಮೂಲಕ ವಿದಾಯ ಹೇಳಿದ್ದರು.
7 / 7
ಐಪಿಎಲ್ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಡಿಕೆ ಹೆಸರಿನಲ್ಲಿದೆ. ಇದೀಗ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿರುವ ದಿನೇಶ್ ಕಾರ್ತಿಕ್ ಆರ್ಸಿಬಿ ಪರ ಬ್ಯಾಟಿಂಗ್ ಕೋಚ್/ಮೆಂಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿರುವುದು ವಿಶೇಷ.
Published On - 10:47 am, Mon, 1 July 24