ರೋಹಿತ್- ಕೊಹ್ಲಿ ಸ್ಥಾನ ತುಂಬಬಲ್ಲ ನಾಲ್ವರು ಕ್ರಿಕೆಟಿಗರನ್ನು ಹೆಸರಿಸಿದ ದಿನೇಶ್ ಕಾರ್ತಿಕ್

Dinesh Karthik: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬಳಿಕ ತಂಡದ ದಿಗ್ಗಜ ಬ್ಯಾಟರ್​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಚುಟುಕು ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಇದೀಗ ಈ ಇಬ್ಬರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಉತ್ತರಿಸುವ ಕೆಲಸವನ್ನು ಮಾಡಿದ್ದಾರೆ.

ಪೃಥ್ವಿಶಂಕರ
|

Updated on: Jul 20, 2024 | 7:09 PM

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬಳಿಕ ತಂಡದ ದಿಗ್ಗಜ ಬ್ಯಾಟರ್​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಚುಟುಕು ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಇದೀಗ ಈ ಇಬ್ಬರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಉತ್ತರಿಸುವ ಕೆಲಸವನ್ನು ಮಾಡಿದ್ದಾರೆ.

1 / 6
ದಿನೇಶ್ ಕಾರ್ತಿಕ್ ಪ್ರಕಾರ, ಟಿ20ಮಾದರಿಯಲ್ಲಿ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸ್ಥಾನವನ್ನು ತುಂಬಬಲ್ಲ ನಾಲ್ಕು ಆಟಗಾರೆಂದರೆ, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಮತ್ತು ಶುಭ್​ಮನ್ ಗಿಲ್.

2 / 6
ಈ ನಾಲ್ಕು ಆಯ್ಕೆಯ ಬಗ್ಗೆ ಮಾತನಾಡಿರುವ ಡಿಕೆ, ‘ಮೊದಲನೆಯದಾಗಿ ರೋಹಿತ್ ಮತ್ತು ಕೊಹ್ಲಿ ಸ್ಥಾನವನ್ನು ತುಂಬುವುದು ಕಷ್ಟ, ಆದರೆ ಪ್ರಸ್ತುತ ಈ ಇಬ್ಬರು ಬ್ಯಾಟ್ಸ್‌ಮನ್‌ಗಳನ್ನು ಬದಲಾಯಿಸಬಲ್ಲ ನಾಲ್ವರು ಆಟಗಾರರನ್ನು ಪ್ಲೇಯಿಂಗ್-11 ರಲ್ಲಿ ನಾನು ನೋಡುತ್ತೇನೆ ಎಂದಿದ್ದಾರೆ. ಈ ನಾಲ್ವರಲ್ಲದೆ, ಯಶಸ್ವಿ ಜೈಸ್ವಾಲ್ ಅವರನ್ನು ಟಿ20 ಕ್ರಿಕೆಟ್‌ನಲ್ಲಿ ಪ್ಲೇಯಿಂಗ್-11 ರಲ್ಲಿ ಸೇರಿಸುವುದು ಖಚಿತ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

3 / 6
ಕಾರ್ತಿಕ್ ಆಯ್ಕೆಯಲ್ಲಿ ಕಾರಣವೂ ಇದ್ದು, ಗಿಲ್ ಅವರನ್ನು ಇತ್ತೀಚೆಗಷ್ಟೇ ಸೀಮಿತ ಓವರ್‌ಗಳ ಫಾರ್ಮ್ಯಾಟ್‌ಗೆ ಭಾರತ ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. ಜಿಂಬಾಬ್ವೆ ವಿರುದ್ಧ ಆಡಿದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ನಾಯಕತ್ವವಹಿಸಿಕೊಂಡಿದ್ದ ಗಿಲ್, ಸರಣಿಯನ್ನು 4-1 ರಿಂದ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಭಾರತದ ಪರ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿರುವ ಗಿಲ್ ಕಳೆದ ವರ್ಷ ನ್ಯೂಜಿಲೆಂಡ್ ವಿರುದ್ಧ 63 ಎಸೆತಗಳಲ್ಲಿ 126 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

4 / 6
ಮತ್ತೊಂದೆಡೆ, ಗಾಯಕ್ವಾಡ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವಕಾಶ ಸಿಕ್ಕಾಗ ಅದ್ಭುತ ಪ್ರದರ್ಶನ ನೀಡಿದ್ದಾರೆ. ಗಾಯಕ್ವಾಡ್ ಅವರ ಗರಿಷ್ಠ ವೈಯಕ್ತಿಕ ಸ್ಕೋರ್ ಆಸ್ಟ್ರೇಲಿಯಾ ವಿರುದ್ಧ ಔಟಾಗದೆ 123 ರನ್ ಆಗಿದೆ. ಕಳೆದ ವರ್ಷ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಯುವ ಭಾರತ ತಂಡದ ನಾಯಕತ್ವ ವಹಿಸಿದ್ದರು.

5 / 6
ಈ ಇಬ್ಬರಂತೆಯೇ ತಿಲಕ್ ವರ್ಮಾ ಕೂಡ ತಮ್ಮ ವೃತ್ತಿಜೀವನವನ್ನು ಅದ್ಭುತವಾಗಿ ಆರಂಭಿಸಿದ್ದು, ರಾಷ್ಟ್ರೀಯ ತಂಡದಲ್ಲಿ ಹಾಗೂ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಭಿಷೇಕ್ ಶರ್ಮಾ ಕೂಡ ಜಿಂಬಾಬ್ವೆ ವಿರುದ್ಧದ ಚೊಚ್ಚಲ ಸರಣಿಯಲ್ಲೂ ಅದ್ಭುತ ಪ್ರದರ್ಶನ ನೀಡಿದ್ದು, 46 ಎಸೆತಗಳಲ್ಲಿ ಶತಕ ಬಾರಿಸಿದ್ದರು.

6 / 6
Follow us