AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಡಿಕೆ ಡುಮ್ಕಿ ಡಮಾರ್

Dinesh Karthik SA20: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಎಂಬ ದಾಖಲೆ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ದಾಖಲೆಯ ಹೊರತಾಗಿ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಡಿಕೆ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಎದುರಿಸಿದ 108 ಎಸೆತಗಳಲ್ಲಿ ಕಾರ್ತಿಕ್ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ.

ಝಾಹಿರ್ ಯೂಸುಫ್
|

Updated on: Feb 06, 2025 | 12:31 PM

Share
ಈ ಬಾರಿಯ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಣಕ್ಕಿಳಿಯುವ ಮೂಲಕ ದಿನೇಶ್ ಕಾರ್ತಿಕ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ SA20 ಲೀಗ್ ಆಡಿದ ಮೊದಲ ಭಾರತೀಯ ಎನಿಸಿಕೊಳ್ಳುವ ಮೂಲಕ. ಇದಾಗ್ಯೂ ದಿನೇಶ್ ಕಾರ್ತಿಕ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

1 / 5
ಪಾರ್ಲ್ ರಾಯಲ್ಸ್ ಪರ 10 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ 7 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕೇವಲ ಒಂದು ಅರ್ಧಶತಕ ಬಾರಿಸಲಷ್ಟೇ ಶಕ್ತರಾಗಿದ್ದರು. ಇನ್ನುಳಿದ 6 ಇನಿಂಗ್ಸ್​ಗಳಲ್ಲೂ ಅವರು ವಿಫಲರಾಗಿದ್ದಾರೆ.

2 / 5
7 ಇನಿಂಗ್ಸ್​ಗಳಲ್ಲಿ ಕೇವಲ 123.07 ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ಡಿಕೆ ಕೇವಲ 128 ರನ್​ಗಳಿಸಿದ್ದಾರೆ. ಈ 128 ರನ್​ಗಳಿಸಲು ಅವರು ತೆಗೆದುಕೊಂಡಿರುವುದು ಬರೋಬ್ಬರಿ 104 ಎಸೆತಗಳನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಸ್ಪೋಟಕ ಇನಿಂಗ್ಸ್ ಆಡುವಲ್ಲಿ ಡಿಕೆ ಸಂಪೂರ್ಣ ವಿಫಲರಾಗಿದ್ದಾರೆ.

3 / 5
ಒಟ್ಟಿನಲ್ಲಿ ಚೊಚ್ಚಲ ಸೌತ್ ಆಫ್ರಿಕಾ ಟಿ20 ಲೀಗ್ ಆಡಿರುವ ದಿನೇಶ್ ಕಾರ್ತಿಕ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದು, ಹೀಗಾಗಿ ಮುಂಬರುವ ಲೀಗ್​ಗಾಗಿ 39 ವರ್ಷದ ಡಿಕೆಯನ್ನು ಪಾರ್ಲ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲೇ  ಉಳಿಸಿಕೊಳ್ಳುವುದು ಅನುಮಾನ ಎನ್ನಬಹುದು.

4 / 5
ಸದ್ಯ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ತೊಡಗಿಸಿಕೊಂಡಿರುವ ದಿನೇಶ್ ಕಾರ್ತಿಕ್ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಅವರು ಆರ್​ಸಿಬಿ ತಂಡದ ಶಿಬಿರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ