Dipendra Singh Airee: ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ವಿಶ್ವದಾಖಲೆ ಬರೆದ ದೀಪೇಂದ್ರ

Dipendra Singh Airee: ನೇಪಾಳ ತಂಡದ ಆಲ್​ರೌಂಡರ್ ದೀಪೇಂದ್ರ ಸಿಂಗ್ ಐರಿ ಮತ್ತೊಮ್ಮೆ ಸಂಚಲನ ಸೃಷ್ಟಿಸಿದ್ದಾರೆ. ಈ ಬಾರಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಹಿಂದೆ 2023 ರಲ್ಲಿ ಮಂಗೋಲಿಯಾ ವಿರುದ್ಧದ ಪಂದ್ಯದಲ್ಲಿ ಐರಿ ಕೇವಲ 9 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಒಂದೇ ಓವರ್​ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Apr 14, 2024 | 7:07 AM

ಒಂದೇ ಓವರ್​ನಲ್ಲಿ 6 ಸಿಕ್ಸ್​ ಬಾರಿಸುವ ಮೂಲಕ ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ (Dipendra Singh Airee) ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 6
ಒಮಾನ್‌ನ ಎಐ ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎಸಿಸಿ ಪುರುಷರ ಪ್ರೀಮಿಯರ್ ಕಪ್‌ನ ಏಳನೇ ಪಂದ್ಯದಲ್ಲಿ ಖತಾರ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ 20ನೇ ಓವರ್​ ಎಸೆದ ಕ್ರಮಾನ್ ಖಾನ್ ಎಸೆತಗಳಿಗೆ ಐರಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದರು. ಈ ಮೂಲಕ 6 ಎಸೆತಗಳಲ್ಲಿ 6 ಸಿಕ್ಸ್ ಬಾರಿಸಿದ ವಿಶೇಷ ಸಾಧನೆ ಮಾಡಿದರು.

2 / 6
ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ಯುವರಾಜ್ ಸಿಂಗ್ ಹಾಗೂ ಕೀರನ್ ಪೊಲಾರ್ಡ್ 6 ಎಸೆತಗಳಲ್ಲಿ 6 ಸಿಕ್ಸ್ ಬಾರಿಸಿ ಅಬ್ಬರಿಸಿದ್ದರು. 2007 ರಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಒಂದೇ ಓವರ್​ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಯುವಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 6
ಇದಾದ ಬಳಿಕ 2021 ರಲ್ಲಿ ಶ್ರೀಲಂಕಾ ಸ್ಪಿನ್ನರ್​ ಅಕಿಲ ಧನಂಜಯ ಓವರ್​ನಲ್ಲಿ ವೆಸ್ಟ್ ಇಂಡೀಸ್ ದಾಂಡಿಗ ಕೀರನ್ ಪೊಲಾರ್ಡ್ 6 ಸಿಕ್ಸ್ ಸಿಡಿಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ದಾಖಲೆಯನ್ನು ಸರಿಗಟ್ಟಿದ್ದರು.

4 / 6
ಇದೀಗ ಖತಾರ್ ವೇಗಿ ಕಮ್ರಾನ್ ಖಾನ್ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ 6 ಸಿಕ್ಸ್​ಗಳನ್ನು ಬಾರಿಸುವ ಮೂಲಕ ದೀಪೇಂದ್ರ ಸಿಂಗ್ ಐರಿ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ 21 ಎಸೆತಗಳನ್ನು ಎದುರಿಸಿದ ದೀಪೇಂದ್ರ ಸಿಂಗ್ ಐರಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ನೇಪಾಳ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಖತಾರ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 178 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನೇಪಾಳ ತಂಡವು 32 ರನ್​ಗಳ ಜಯ ಸಾಧಿಸಿದೆ.

6 / 6
Follow us
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು

‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’

ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು

ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ

Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘