AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DPL 2024: ಚೊಚ್ಚಲ ಸೆಂಚುರಿ ಸಿಡಿಸಿ ದಾಖಲೆ ಬರೆದ ಆರ್ಯ

Delhi Premier League 2024: ಡೆಲ್ಲಿ ಪ್ರೀಮಿಯರ್ ಲೀಗ್​ ಟೂರ್ನಿಯಲ್ಲಿ 235 ರನ್ ಬಾರಿಸುವ ಮೂಲಕ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡ ಹೊಸ ದಾಖಲೆ ನಿರ್ಮಿಸಿದೆ. ಈ ಮೂಲಕ ಡಿಪಿಎಲ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ತಂಡವೆನಿಸಿಕೊಂಡಿದೆ. ಇದೇ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಡಿಪಿಎಲ್​ನಲ್ಲಿ ಚೊಚ್ಚಲ ಸೆಂಚುರಿ ಸಿಡಿಸಿದ ದಾಖಲೆಯನ್ನು ಪ್ರಿಯಾಂಶ್ ಆರ್ಯ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 28, 2024 | 11:29 AM

Share
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಪ್ರೀಮಿಯರ್ ಲೀಗ್ ಟಿ20 ಟೂರ್ನಿಯ 15ನೇ ಪಂದ್ಯದಲ್ಲಿ ಎಡಗೈ ದಾಂಡಿಗ ಪ್ರಿಯಾಂಶ್ ಆರ್ಯ ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಪುರಾಣಿ ಡೆಲ್ಲಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಸಾರ್ಥಕ್ ರೇ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 101 ರನ್​ಗಳ ಜೊತೆಯಾಟವಾಡಿದ ಬಳಿಕ ಸಾರ್ಥಕ್ (49) ವಿಕೆಟ್ ಒಪ್ಪಿಸಿದರು.

2 / 5
ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ ಪ್ರಿಯಾಂಶ್ ಆರ್ಯ ಪುರಾಣಿ ಡೆಲ್ಲಿ ಬೌಲರ್​ಗಳ ಬೆಂಡೆತ್ತಿದರು. ಕೇವಲ 55 ಎಸೆತಗಳನ್ನು ಎದುರಿಸಿದ ಆರ್ಯ 7 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್​ ಬಾರಿಸಿದರು. ಈ ಸಿಡಿಲಬ್ಬರದ ಶತಕದ ನೆರವಿನಿಂದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 235 ರನ್ ಕಲೆಹಾಕಿತು.

3 / 5
236 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪುರಾಣಿ ಡೆಲ್ಲಿ ತಂಡಕ್ಕೆ ಅರ್ನವ್ (36) ಹಾಗೂ ಅರ್ಪಿತ್ ರಾಣಾ (29) ಉತ್ತಮ ಆರಂಭ ನೀಡಿದ್ದರು. ಆದರೆ ಆ ಬಳಿಕ ಬಂದ ಬ್ಯಾಟರ್​ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ವಿಫಲರಾದರು. ಪರಿಣಾಮ ಪುರಾಣಿ ಡೆಲ್ಲಿ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 147 ರನ್ ಗಳಿಸಲಷ್ಟೇ ಶಕ್ತರಾದರು.

4 / 5
ಈ ಮೂಲಕ ಆಯುಷ್ ಬದೋನಿ ನಾಯಕತ್ವದ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 88 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಅಲ್ಲದೆ ಈ ಪಂದ್ಯದಲ್ಲಿ 107 ರನ್​ಗಳನ್ನು ಬಾರಿಸಿದ ಎಡಗೈ ಬ್ಯಾಟರ್ ಪ್ರಿಯಾಂಶ್ ಆರ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ