Cheteshwar Pujara: ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 60ನೇ ಶತಕ ಸಿಡಿಸಿ ಮಿಂಚಿದ ಚೇತೇಶ್ವರ್ ಪೂಜಾರ..!

Duleep Trophy 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ನಿರಸ ಪ್ರದರ್ಶನ ನೀಡಿ ಟೀಂ ಇಂಡಿಯಾದಿಂದ ಹೊರಬಂದಿರುವ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಯ ಚೇತೇಶ್ವರ್ ಪೂಜಾರ ದೇಶೀ ಟೂರ್ನಿ ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ಪೃಥ್ವಿಶಂಕರ
|

Updated on:Jul 08, 2023 | 7:11 AM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿ ಟೀಂ ಇಂಡಿಯಾದಿಂದ ಹೊರಬಂದಿರುವ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಚೇತೇಶ್ವರ್ ಪೂಜಾರ ದೇಶೀ ಟೂರ್ನಿ ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

1 / 7
ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಪಶ್ಚಿಮ ವಲಯ ತಂಡ ಕೇಂದ್ರ ವಲಯದ ವಿರುದ್ಧ ಸೆಣಸುತ್ತಿದೆ. ಈ ಪಂದ್ಯದಲ್ಲಿ ಪಶ್ಚಿಮ ವಲಯದ ಪರ ಕಣಕ್ಕಿಳಿದಿರುವ ಪೂಜಾರಗೆ ಮೊದಲ ಇನ್ನಿಂಗ್ಸ್‌ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ತಮ್ಮ ಹಳೆಯ ಫಾರ್ಮ್​ಗೆ ಮರಳಿದ ಪೂಜಾರ ಶತಕ ಸಿಡಿಸಿ ಮಿಂಚಿದರು.

2 / 7
ದುಲೀಪ್ ಟ್ರೋಫಿಯಲ್ಲಿ ಚೇತೇಶ್ವರ್ ಪೂಜಾರ ಅವರ ಶತಕ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಧೋನಿಯ 42 ನೇ ಹುಟ್ಟುಹಬ್ಬದಂದು ಪೂಜಾರ ಶತಕ ಸಿಡಿಸಿದ್ದು ವಿಶೇಷತೆಗೆ ಒಂದು ಪ್ರಮುಖ ಕಾರಣವಾಗಿದ್ದರೆ, ಮತ್ತೊಂದೆಡೆ, ಪೂಜಾರ ಅವರ ಈ ಶತಕವು ಬಿಸಿಸಿಐ ಆಯ್ಕೆ ಮಂಡಳಿಗೆ ತಕ್ಕ ಪ್ರತ್ಯುತ್ತರವಾಗಿದೆ.

3 / 7
ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತದ ಟೆಸ್ಟ್ ತಂಡವನ್ನು ಪ್ರಕಟಿಸಿದಾಗ ಅದರಲ್ಲಿ ಪೂಜಾರ ಅವರ ಹೆಸರಿರಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಪೂಜಾರ ಕಳಪೆ ಬ್ಯಾಟಿಂಗ್ ಮಾಡಿದ್ದೆ ಅವರನ್ನು ಭಾರತ ಟೆಸ್ಟ್ ತಂಡದಿಂದ ಕೈಬಿಡಲು ಪ್ರಮುಖ ಕಾರಣವಾಗಿತ್ತು. ಆದರೆ, ಈಗ ಶತಕ ಬಾರಿಸುವ ಮೂಲಕ ಪೂಜಾರ ಎಲ್ಲರಿಗೂ ಉತ್ತರ ನೀಡಿದ್ದಾರೆ.

4 / 7
ಇನ್ನು ಪಶ್ಚಿಮ ವಲಯದ ಪರ ಶತಕ ಸಿಡಿಸಿದ ಪೂಜಾರ ಅವರ 60ನೇ ಪ್ರಥಮ ದರ್ಜೆ ಶತಕ ಇದಾಗಿದೆ. ತಮ್ಮ ಇನ್ನಿಂಗ್ಸ್​ನಲ್ಲಿ 278 ಎಸೆತಗಳನ್ನು ಎದುರಿಸಿದ ಪೂಜಾರ 133 ರನ್‌ಗಳ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದರು. ಹಾಗೆಯೇ ತಮ್ಮ ಶತಕದ ನೆರವಿನಿಂದ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದಲ್ಲದೆ ಕೇಂದ್ರ ವಲಯ ತಂಡವನ್ನು ಹಿನ್ನಡೆಗೆ ತಳ್ಳಿದರು.

5 / 7
ಪೂಜಾರ ಹೊರತಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ನೇಮಕಗೊಂಡಿರುವ ಸೂರ್ಯಕುಮಾರ್ ಯಾದವ್ ಕೂಡ ಅರ್ಧಶತಕ ಬಾರಿಸಿ ತಮ್ಮ ಫಾರ್ಮ್ ತೋರಿಸಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಸೂರ್ಯ 58 ಎಸೆತಗಳಲ್ಲಿ 52 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ ಆಡಿದರು.

6 / 7
ಈ ಪಂದ್ಯದ ಕುರಿತು ಮಾತನಾಡುವುದಾದರೆ, ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಶ್ಚಿಮ ವಲಯ ತಂಡ ಸ್ಕೋರ್‌ಬೋರ್ಡ್‌ನಲ್ಲಿ 220 ರನ್ ಕಲೆಹಾಕಿತು. ಇದಾದ ಬಳಿಕ ಕೇಂದ್ರ ವಲಯ ತಂಡ ಕೇವಲ 128 ರನ್‌ಗಳಿಗೆ ಆಲೌಟ್ ಆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಪೂಜಾರ ಅವರ ಶತಕದ ನೆರವಿನಿಂದ ಪಶ್ಚಿಮ ವಲಯ ತಂಡವು ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿದೆ. ಮತ್ತು ಮೂರನೇ ದಿನದಂತ್ಯಕ್ಕೆ 9 ವಿಕೆಟ್‌ಗೆ 292 ರನ್ ಕಲೆಹಾಕಿದೆ. ಪಶ್ಚಿಮ ವಲಯ ಇದುವರೆಗೆ ಮೊದಲ ಇನಿಂಗ್ಸ್ ಆಧಾರದ ಮೇಲೆ ಒಟ್ಟು 384 ರನ್‌ಗಳ ಮುನ್ನಡೆ ಸಾಧಿಸಿದೆ.

7 / 7

Published On - 7:06 am, Sat, 8 July 23

Follow us
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ