ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ, ಈ ಪಂದ್ಯದಲ್ಲಿ ಕೇಂದ್ರ ವಲಯ ಗೆಲುವಿನ ಹೊಸ್ತಿಲಲ್ಲಿದೆ. ಮೊದಲ ಇನಿಂಗ್ಸ್‌ನಲ್ಲಿ ಕೇಂದ್ರ ವಲಯ 182 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಪೂರ್ವ ವಲಯ 122 ರನ್ ಗಳಿಸಲಷ್ಟೇ ಶಕ್ತವಾಯಿತು. ಎರಡನೇ ಇನಿಂಗ್ಸ್‌ನಲ್ಲಿ ಕೇಂದ್ರ ವಲಯ 239 ರನ್ ಗಳಿಸಿ, ಪೂರ್ವ ವಲಯದ ಮುಂದೆ 300 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಉತ್ತರವಾಗಿ ಪೂರ್ವ ವಲಯ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 69 ರನ್ ಗಳಿಸಲಷ್ಟೇ ಶಕ್ತವಾಗಿ 6 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿದೆ.