Devdutt Padikkal: ದುಲೀಪ್ ಟ್ರೋಫಿಯ ಮೂರನೇ ಪಂದ್ಯ ಭಾರತ ಎ ಮತ್ತು ಭಾರತ ಡಿ ನಡುವೆ ನಡೆಯುತ್ತಿದೆ. ಭಾರತ ಡಿ ಪರ ಆಡುತ್ತಿರುವ ದೇವದತ್ ಪಡಿಕ್ಕಲ್ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 124 ಎಸೆತಗಳನ್ನು ಎದುರಿಸಿ 15 ಬೌಂಡರಿಗಳ ಸಹಿತ 92 ರನ್ ಕಲೆಹಾಕಿದರು. ಆದರೆ ಕೇವಲ 8 ರನ್ಗಳಿಂದ ಶತಕ ವಂಚಿತರಾದರು. ಆದಾಗ್ಯೂ ಪಡಿಕ್ಕಲ್ ಅವರ ಇನ್ನಿಂಗ್ಸ್ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತದೆ.