Ishan Kishan Century: ದುಲೀಪ್ ಟ್ರೋಫಿಯಲ್ಲಿ ಅಮೋಘ ಶತಕ ಸಿಡಿಸಿದ ಇಶಾನ್ ಕಿಶನ್

Updated on: Sep 12, 2024 | 9:37 PM

Ishan Kishan Century: ಈ ಶತಕ ಇಶಾನ್ ಕಿಶನ್ ಅವರ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ ಏಳನೇ ಶತಕವಾಗಿದ್ದು, 88 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಕಿಶನ್ 126 ಎಸೆತಗಳಲ್ಲಿ 14 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 111 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು.

1 / 6
ಟೀಂ ಇಂಡಿಯಾದಿಂದ ಬಹಳ ದಿನಗಳಿಂದ ಹೊರಗುಳಿದಿರುವ ಯುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್, ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುವ ಸಲುವಾಗಿ ದೇಶೀ ಟೂರ್ನಿ ದುಲೀಪ್ ಟ್ರೋಫಿಯಲ್ಲಿ ಅಮೋಘ ಶತಕ ಬಾರಿಸಿದ್ದಾರೆ.

ಟೀಂ ಇಂಡಿಯಾದಿಂದ ಬಹಳ ದಿನಗಳಿಂದ ಹೊರಗುಳಿದಿರುವ ಯುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್, ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುವ ಸಲುವಾಗಿ ದೇಶೀ ಟೂರ್ನಿ ದುಲೀಪ್ ಟ್ರೋಫಿಯಲ್ಲಿ ಅಮೋಘ ಶತಕ ಬಾರಿಸಿದ್ದಾರೆ.

2 / 6

ದುಲೀಪ್ ಟ್ರೋಫಿ ಟೂರ್ನಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಕಿಶನ್ 2ನೇ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡಿದ್ದಾರೆ. ಟೂರ್ನಿಯಲ್ಲಿ ಭಾರತ ಸಿ ತಂಡದ ಪರ ಆಡುತ್ತಿರುವ ಕಿಶನ್, ಭಾರತ ಬಿ ತಂಡದ ವಿರುದ್ಧ ಪ್ರಬಲ ಶತಕ ಬಾರಿಸುವ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ.

3 / 6

ಈ ಶತಕ ಇಶಾನ್ ಕಿಶನ್ ಅವರ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ ಏಳನೇ ಶತಕವಾಗಿದ್ದು, 88 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಕಿಶನ್ 126 ಎಸೆತಗಳಲ್ಲಿ 14 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 111 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು.

4 / 6

ವಾಸ್ತವವಾಗಿ ಬುಚಿ ಬಾಬು ಟೂರ್ನಿಯ ವೇಳೆ ಬೆನ್ನುನೋವಿಗೆ ತುತ್ತಾದ ಇಶಾನ್‌ಗೆ ದುಲೀಪ್ ಟ್ರೋಫಿಯ ಮೊದಲ ಸುತ್ತಿನಲ್ಲಿ ಅವಕಾಶ ಸಿಗಲಿಲ್ಲ. ಅವರ ಸ್ಥಾನದಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಸ್ಥಾನ ನೀಡಲಾಗಿತ್ತು. ಕಳೆದ ವಾರ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ತಂಡಕ್ಕೆ ಆಯ್ಕೆಯಾದ ಆಟಗಾರರು ಶಿಬಿರವನ್ನು ತೊರೆಯಬೇಕಾಗಿದ್ದರಿಂದ ಬಿಸಿಸಿಐ ದುಲೀಪ್ ಟ್ರೋಫಿ ತಂಡದಲ್ಲಿ ಬದಲಾವಣೆಗಳನ್ನು ಮಾಡಿದೆ.

5 / 6

ಅದರಂತೆ ದುಲೀಪ್ ಟ್ರೋಫಿಯಲ್ಲಿ ಆಡುವ ಅವಕಾಶ ಪಡೆದುಕೊಂಡಿರುವ ಕಿಶನ್​ಗೆ ಈ ಟೂರ್ನಿ ಅತ್ಯಂತ ಮಹತ್ವದ್ದಾಗಿದೆ. ಮೇಲೆ ಹೇಳಿದಂತೆ ದೀರ್ಘಕಾಲದವರೆಗೆ ಟೀಂ ಇಂಡಿಯಾದಿಂದ ಹೊರಗುಳಿದಿರುವ ಅವರು ಈ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಮತ್ತೆ ಟೀಂ ಇಂಡಿಯಾದಲ್ಲಿ ಆಯ್ಕೆಯಾಗುವ ಸಾಧ್ಯತೆಗಳಿವೆ.

6 / 6

ಅಂದಹಾಗೆ, ಇಶಾನ್ ಇತ್ತೀಚೆಗೆ ನಡೆದಿದ್ದ ಬುಚ್ಚಿ ಬಾಬು ಟೂರ್ನಮೆಂಟ್‌ನಲ್ಲಿ ಶತಕ ಬಾರಿಸಿದ್ದರು. ಆದರೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾದ ಕಿಶನ್, ಇದೇ ಬಾಂಗ್ಲಾದೇಶ ವಿರುದ್ಧ ನಡೆಯಲ್ಲಿರುವ ಟಿ20 ಸರಣಿಯಲ್ಲಿ ತಂಡದಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Loading...
Unable to load recommendations.
Follow Us