Duleep Trophy 2024: ದುಲೀಪ್ ಟ್ರೋಫಿ ಮೊದಲ ಸುತ್ತಿನಿಂದ ಸೂರ್ಯಕುಮಾರ್ ಔಟ್
Suryakumar Yadav: ಸೆಪ್ಟೆಂಬರ್ 5 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಮಿಂಚಿ ಮತ್ತೆ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಪಡೆದುಕೊಳ್ಳುವ ಇರಾದೆಯಲ್ಲಿದ್ದ ಸೂರ್ಯಕುಮಾರ್ ಯಾದವ್ಗೆ ಆಘಾತ ಎದುರಾಗಿದೆ. ಬುಚ್ಚಿಬಾಬು ಟೂರ್ನಿಯಲ್ಲಿ ಮುಂಬೈ ಪರ ಆಡುತ್ತಿದ್ದಾಗ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಇದೀಗ ದುಲೀಪ್ ಟ್ರೋಫಿ 2024 ರ ಮೊದಲ ಸುತ್ತಿನಿಂದ ಹೊರಬಿದ್ದಿದ್ದಾರೆ.