Sign In

By signing in or creating an account, you agree with Associated Broadcasting Company's Terms & Conditions and Privacy Policy.

WPLನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಲ್ಲಿಸ್ ಪೆರ್ರಿ

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ ತಂಡ ಜಯ ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 180 ರನ್ ಗಳಿಸಿದರೆ, ಯುಪಿ ವಾರಿಯರ್ಸ್‌ ತಂಡ ಕೂಡ 180 ರನ್ ಕಲೆಹಾಕಿತು. ಆ ಬಳಿಕ ನಡೆದ ಸೂಪರ್ ಓವರ್ ನಲ್ಲಿ ಯುಪಿ ವಾರಿಯರ್ಸ್‌ 8 ರನ್ ಗಳಿಸಿದರೆ, ಆರ್ ಸಿಬಿ 4 ರನ್ ಗಳಿಸಲಷ್ಟೇ ಶಕ್ತರಾದರು.

ಝಾಹಿರ್ ಯೂಸುಫ್
|

Updated on: Feb 25, 2025 | 7:32 AM

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ (WPL) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ್ತಿ ಎಲ್ಲಿಸ್ ಪೆರ್ರಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಬರೋಬ್ಬರಿ 800+ ರನ್ ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್‌ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೆರ್ರಿ 56 ಎಸೆತಗಳನ್ನು ಎದುರಿಸಿ 3 ಸಿಕ್ಸ್ ಹಾಗೂ 9 ಫೋರ್ ಗಳೊಂದಿಗೆ 90 ರನ್ ಸಿಡಿಸಿದ್ದರು.

2 / 5
ಈ 90 ರನ್ ಗಳೊಂದಿಗೆ ಎಲ್ಲಿಸ್ ಪೆರ್ರಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800 ರನ್ ಗಳನ್ನು ಪೂರೈಸಿದ್ದಾರೆ. ಈ ಮೂಲಕ WPL ಇತಿಹಾಸದಲ್ಲೇ 800+ ರನ್ ಗಳಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ.

3 / 5
ಆರ್​ಸಿಬಿ ಪರ ಈವರೆಗೆ 21 ಇನಿಂಗ್ಸ್ ಆಡಿರುವ ಎಲ್ಲಿಸ್ ಪೆರ್ರಿ 7 ಅರ್ಧಶತಕಗಳೊಂದಿಗೆ ಒಟ್ಟು 835 ರನ್ ಕಲೆ ಹಾಕಿದ್ದಾರೆ. ಈ ವೇಳೆ ಪೆರ್ರಿ‌ ಬ್ಯಾಟ್ ನಿಂದ 95 ಫೋರ್ ಹಾಗೂ 21 ಸಿಕ್ಸ್ ಗಳು ಸಹ ಮೂಡಿ ಬಂದಿವೆ.

4 / 5
ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್‌ನ ರನ್ ಸರದಾರಿಣಿ ಎನಿಸಿಕೊಂಡಿರುವ ಎಲ್ಲಿಸ್ ಪೆರ್ರಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಕಡೆಯಿಂದ ಉತ್ತಮ ಪೈಪೋಟಿ ಇದೆ. ಲ್ಯಾನಿಂಗ್ ಈವರೆಗೆ 782 ರನ್ ಕಲೆಹಾಕಿದ್ದು, ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 5
Follow us