Ellyse Perry: RCB ಪರ ಹೊಸ ಇತಿಹಾಸ ನಿರ್ಮಿಸಿದ ಎಲ್ಲಿಸ್ ಪೆರ್ರಿ

| Updated By: ಝಾಹಿರ್ ಯೂಸುಫ್

Updated on: Mar 16, 2024 | 6:56 AM

Ellyse Perry: ಮುಂಬೈ ಇಂಡಿಯನ್ಸ್ ವಿರುದ್ಧದ ಲೀಗ್​ ಹಂತದ ಕೊನೆಯ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿ ಮಿಂಚಿದ್ದ ಎಲ್ಲಿಸ್ ಪೆರ್ರಿ ಇದೀಗ ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಆರ್​ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ಗೆಲುವಿನೊಂದಿಗೆ ಎಲ್ಲಿಸ್ ಪೆರ್ರಿ ಆರ್​ಸಿಬಿ ಪರ ವಿಶೇಷ ದಾಖಲೆಯನ್ನು ಕೂಡ ಬರೆದಿದ್ದಾರೆ.

1 / 6
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 5 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿದೆ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಏಕಾಂಗಿಯಾಗಿ ಹೋರಾಡಿದ ಎಲ್ಲಿಸ್ ಪೆರ್ರಿ 50 ಎಸೆತಗಳಲ್ಲಿ 8 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 66 ರನ್​ಗಳ ಕೊಡುಗೆ ನೀಡಿದರು.

3 / 6
ಈ ಮೂಲಕ ಆರ್​ಸಿಬಿ ತಂಡ 135 ರನ್​ ಕಲೆಹಾಕುವಲ್ಲಿ ಪೆರ್ರಿ ಪ್ರಮುಖ ಪಾತ್ರವಹಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 6 ವಿಕೆಟ್​ ಕಳೆದುಕೊಂಡು 130 ರನ್​ಗಳಿಸಲಷ್ಟೇ ಶಕ್ತಾರಾದರು. ಈ ಮೂಲಕ ಆರ್​ಸಿಬಿ 5 ವಿಕೆಟ್​ಗಳ ಜಯ ಸಾಧಿಸಿದೆ.

4 / 6
ಈ ಪಂದ್ಯದಲ್ಲಿ ಅರ್ಧಶತಕದ ಜೊತೆಗೆ 1 ವಿಕೆಟ್ ಕಬಳಿಸಿ ಮಿಂಚಿದ್ದ ಎಲ್ಲಿಸ್ ಪೆರ್ರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ವಿಶೇಷ ಎಂದರೆ ಈ ಪಂದ್ಯದಲ್ಲಿ ಬಾರಿಸಿದ 60 ರನ್​ಗಳೊಂದಿಗೆ ಪೆರ್ರಿ ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ 500+ ರನ್​ ಕಲೆಹಾಕಿದ ಮೊದಲ ಆರ್​ಸಿಬಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಆರ್​ಸಿಬಿ ಪರ ಇದುವರೆಗೆ 16 ಇನಿಂಗ್ಸ್​ ಆಡಿರುವ ಎಲ್ಲಿಸ್ ಪೆರ್ರಿ 565 ರನ್​ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಇದರ ಜೊತೆಗೆ WPL ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

6 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್. ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಒಟ್ಟು 17 ಇನಿಂಗ್ಸ್ ಆಡಿರುವ ಲ್ಯಾನಿಂಗ್ 653 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ 565 ರನ್​ ಕಲೆಹಾಕಿರುವ ಎಲ್ಲಿಸ್ ಪೆರ್ರಿ ಫೈನಲ್ ಪಂದ್ಯದಲ್ಲಿ 89 ರನ್ ಸಿಡಿಸಿದರೆ ಅಗ್ರಸ್ಥಾನಕ್ಕೇರಬಹುದು.

Published On - 6:52 am, Sat, 16 March 24