Updated on: Jul 23, 2023 | 8:39 AM
ಶ್ರೀಲಂಕಾದಲ್ಲಿ ನಡೆಯುತ್ತಿರುವ ಉದಯೋನ್ಮುಖ ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ.
ಆತಿಥೇಯ ಶ್ರೀಲಂಕಾ ತಂಡವನ್ನು ಸೋಲಿಸಿದ ಪಾಕಿಸ್ತಾನ ತಂಡ ಫೈನಲ್ ತಲುಪಿದ್ದರೆ, ಇತ್ತ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ ಎ ತಂಡ ಉದಯೋನ್ಮುಖ ಏಷ್ಯಾ ಕಪ್‌ನ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಜುಲೈ 23ರ ಭಾನುವಾರದಂದು ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ನಡೆಯಲಿದ್ದು, ಈ ಹೈವೋಲ್ಟೇಜ್ ಕದನ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಫೈನಲ್ ಪಂದ್ಯವು ಭಾರತದ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಬದ್ದವೈರಿಗಳ ಈ ಕಾಳಗವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಆನ್‌ಲೈನ್‌ನಲ್ಲಿ Fancode ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಭಾರತ ಎ ತಂಡ: ಯಶ್ ಧುಲ್ (ನಾಯಕ), ಧ್ರುವ ಜುರೈಲ್, ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ನಿಶಾಂತ್ ಸಿಂಧು, ರಿಯಾನ್ ಪರಾಗ್, ಹರ್ಷಿತ್ ರಾಣಾ, ಮಾನವ್ ಸುತಾರ್, ರಾಜವರ್ಧನ್ ಹಂಗರಗೇಕರ್, ಯುವರಾಜ್ ಸಿಂಗ್ ದೋಡಿಯಾ, ಪ್ರಭುಸಿಮ್ರಾನ್ ಸಿಂಗ್, ಆಕಾಶ್ ಸಿಂಗ್, ನಿತೀಶ್ ಪ್ರದೋಶ್ ಪಾಲ್.
ಪಾಕಿಸ್ತಾನ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ/ವಿಕೆಟ್ ಕೀಪರ್), ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಒಮರ್ ಯೂಸುಫ್, ತಾಯೆಬ್ ತಾಹಿರ್, ಖಾಸಿಮ್ ಅಕ್ರಂ, ಮುಬಾಸಿರ್ ಖಾನ್, ಅಮದ್ ಬಟ್, ಮೊಹಮ್ಮದ್ ವಾಸಿಂ ಜೂನಿಯರ್, ಸುಫೀನ್ ಮುಕಿಮ್, ಅರ್ಷದ್ ಇಕ್ಬಾಲ್, ಹಸಿಬುಲ್ಲಾ ಗ್ಝು ಖಾಲಾಮ್, ಮೆಹ್ರಾಂ ಖಾನ್.