Virat Kohli – Rohit Sharma: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಟಿ20 ಕೆರಿಯರ್ ಅಂತ್ಯ?

| Updated By: ಝಾಹಿರ್ ಯೂಸುಫ್

Updated on: Jan 14, 2023 | 8:30 PM

Rohit Sharma - Virat Kohli: ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಆಡುತ್ತಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ.

1 / 8
ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಈ ಬಾರಿ ಕೂಡ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಈ ಇಬ್ಬರು ಆಟಗಾರರನ್ನು ಆಯ್ಕೆ ಮಾಡಿರಲಿಲ್ಲ. ಇದಾಗ್ಯೂ ಏಕದಿನ ಸರಣಿಗಳಲ್ಲಿ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ಕಾಣಿಸಿಕೊಂಡಿದ್ದರು. ಅಂದರೆ ಈ ಇಬ್ಬರು ಆಟಗಾರರು ವಿಶ್ರಾಂತಿಯ ಕಾರಣ ಹೊರಗುಳಿದಿರಲಿಲ್ಲ ಎಂಬುದು ಸ್ಪಷ್ಟ.

2 / 8
ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಆಡುತ್ತಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಆದರೆ ಈ ಇಬ್ಬರು ಆಟಗಾರರು ತಂಡದಿಂದ ಹೊರಗುಳಿದಿರುವ ಬಗ್ಗೆ ಬಿಸಿಸಿಐ ನಿರ್ದಿಷ್ಟ ಕಾರಣ ತಿಳಿಸಿಲ್ಲ. ಇದರರ್ಥ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದಾಗಿದೆ. ಏಕೆಂದರೆ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಅವರು ವೈಯುಕ್ತಿಕ ಕಾರಣಗಳಿಂದಾಗಿ ನ್ಯೂಜಿಲೆಂಡ್ ಸರಣಿಗಳಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಇದೇ ವೇಳೆ ಸ್ಪಷ್ಟಪಡಿಸಿದೆ.

3 / 8
ಇತ್ತ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡದೇ ಬಿಸಿಸಿಐ ಜಾಣ ಮೌನಕ್ಕೆ ಶರಣಾಗಿದೆ. ಇದರೊಂದಿಗೆ ಚುಟುಕು ಕ್ರಿಕೆಟ್​ನಲ್ಲಿ ಇಬ್ಬರು ದಿಗ್ಗಜರ ಯುಗಾಂತ್ಯವಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಬಿಸಿಸಿಐ ಮುಂಬರುವ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಯುವ ಪಡೆಯನ್ನು ಆಯ್ಕೆ ಮಾಡುತ್ತಿದೆ. ಇತ್ತ 35 ವರ್ಷ ರೋಹಿತ್ ಶರ್ಮಾ 2024 ರ ಟಿ20 ವಿಶ್ವಕಪ್ ಆಡುವುದಿಲ್ಲ ಎಂದೇ ಹೇಳಬಹುದು. ಇನ್ನು 34 ವರ್ಷ ವಿರಾಟ್ ಕೊಹ್ಲಿ ಕೂಡ ಅನುಮಾನ. ಹೀಗಾಗಿಯೇ ಈ ಇಬ್ಬರನ್ನು ಸತತ ಸರಣಿಗಳಿಂದ ಕೈ ಬಿಡಲಾಗಿದೆ.

4 / 8
ಈ ಬಗ್ಗೆ ಬಿಸಿಸಿಐ ಕೂಡ ಇಬ್ಬರು ಆಟಗಾರರೊಂದಿಗೆ ಮಾತುಕತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗೆ ರೋಹಿತ್ ಶರ್ಮಾ ಕೂಡ ಹೇಳಿಕೆ ನೀಡಿದ್ದರು. ಟಿ20 ಕ್ರಿಕೆಟ್​ಗೆ ವಿದಾಯ ಹೇಳುತ್ತೀರಾ ಎಂಬ ಪ್ರಶ್ನೆಗೆ ಹಿಟ್​ಮ್ಯಾನ್ ಮಾರ್ಮಿಕವಾಗಿ ಉತ್ತರಿಸಿದ್ದರು.

5 / 8
ನಾನು ಟಿ20 ಕ್ರಿಕೆಟ್​ನಿಂದ ಹಿಂದೆ ಸರಿಯಲು ನಿರ್ಧರಿಸಿಲ್ಲ. ಐಪಿಎಲ್ ನಂತರ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ರೋಹಿತ್ ಶರ್ಮಾ ಹೇಳಿದ್ದರು. ಇಲ್ಲಿ ಐಪಿಎಲ್ ಅನ್ನು ಉಲ್ಲೇಖಿಸಿ ಹಿಟ್​ಮ್ಯಾನ್ ಟಿ20 ತಂಡಕ್ಕೆ ಕಂಬ್ಯಾಕ್ ಮಾಡುತ್ತೇನೆ ಎಂದು ಪರೋಕ್ಷವಾಗಿ ತಿಳಿಸಿದ್ದರು. ಅಂದರೆ ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಮುನ್ನವೇ ಟಿ20 ತಂಡದಲ್ಲಿ ಅವಕಾಶ ಸಿಗುವುದಿಲ್ಲ ಎಂಬುದು ರೋಹಿತ್ ಶರ್ಮಾಗೆ ತಿಳಿದಿತ್ತು. ಹೀಗಾಗಿಯೇ ಐಪಿಎಲ್ ಬಳಿಕ ನೋಡೋಣ ಎಂದಿದ್ದರು.

6 / 8
ಇದೀಗ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ತಂಡ ಘೋಷಣೆಯಾಗಿದೆ. ಈ ಸರಣಿಯ ಬಳಿಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಆಡಲಿದೆ. ಇದರ ನಂತರ ಐಪಿಎಲ್ ಶುರುವಾಗಲಿದೆ. ಇದೇ ಕಾರಣದಿಂದಾಗಿ ಐಪಿಎಲ್ ಬಳಿಕ ನೋಡೋಣ ಎಂದು ಹಿಟ್​ಮ್ಯಾನ್ ಹೇಳಿದ್ದಾರೆ. ಅಂದರೆ ಟಿ20 ತಂಡಕ್ಕೆ ಮರಳಲು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಮುಂದಿರುವ ಏಕೈಕ ಆಯ್ಕೆ ಐಪಿಎಲ್.

7 / 8
ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಮತ್ತೆ ಟಿ20 ತಂಡದಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ ರೋಹಿತ್ ಶರ್ಮಾ. ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಫಲರಾದರೆ ಇಬ್ಬರು ದಿಗ್ಗಜರ ಟೀಮ್ ಇಂಡಿಯಾ ಟಿ20 ಕೆರಿಯರ್ ಖತಂ ಎಂದೇ ವಿಶ್ಲೇಷಿಸಲಾಗುತ್ತಿದೆ.

8 / 8
ಟೀಮ್ ಇಂಡಿಯಾ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್​ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.