- Kannada News Photo gallery Cricket photos ENG Vs AUS Jos Buttler Ruled Out of T20Is Phil Salt Named New Captain
ENG vs AUS: ಟಿ20 ಸರಣಿಯಿಂದ ಬಟ್ಲರ್ ಔಟ್; ನೂತನ ನಾಯಕನ ನೇಮಕ
ENG vs AUS: ಸರಣಿಗೂ ಮುನ್ನ ಇಂಗ್ಲೆಂಡ್ ತಂಡ ದೊಡ್ಡ ಹಿನ್ನಡೆ ಅನುಭವಿಸಿದ್ದು, ಇಂಗ್ಲೆಂಡ್ ತಂಡದ ಹಾಲಿ ನಾಯಕ ಜೋಸ್ ಬಟ್ಲರ್ ಗಾಯದ ಸಮಸ್ಯೆಯಿಂದ ಈ ಸರಣಿಯಿಂದ ಹೊರಗುಳಿದಿದ್ದಾರೆ. ಬಟ್ಲರ್ ಬಲಗಾಲಿನ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದು, ಅವರ ಜಾಗದಲ್ಲಿ ಸರ್ರೆ ಆಲ್‌ರೌಂಡರ್ ಜೇಮಿ ಓವರ್ಟನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
Updated on: Sep 05, 2024 | 7:17 PM

ಟಿ20 ಹಾಗೂ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಇದೇ ತಿಂಗಳ 11 ರಿಂದ ಮುಖಾಮುಖಿಯಾಗಲಿವೆ. ಮೊದಲಿಗೆ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯಲ್ಲಿದ್ದು, ಆ ಬಳಿಕ ಏಕದಿನ ಸರಣಿ ಪ್ರಾರಂಭವಾಗಲಿದೆ. ಇದೀಗ ಮೂರು ಪಂದ್ಯಗಳ ಟಿ20 ಸರಣಿಗೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಿದೆ.

ಈ ಸರಣಿಗೂ ಮುನ್ನ ಇಂಗ್ಲೆಂಡ್ ತಂಡ ದೊಡ್ಡ ಹಿನ್ನಡೆ ಅನುಭವಿಸಿದ್ದು, ಇಂಗ್ಲೆಂಡ್ ತಂಡದ ಹಾಲಿ ನಾಯಕ ಜೋಸ್ ಬಟ್ಲರ್ ಗಾಯದ ಸಮಸ್ಯೆಯಿಂದ ಈ ಸರಣಿಯಿಂದ ಹೊರಗುಳಿದಿದ್ದಾರೆ. ಬಟ್ಲರ್ ಬಲಗಾಲಿನ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದು, ಅವರ ಜಾಗದಲ್ಲಿ ಸರ್ರೆ ಆಲ್‌ರೌಂಡರ್ ಜೇಮಿ ಓವರ್ಟನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಬಟ್ಲರ್ ಅನುಪಸ್ಥಿತಿಯಲ್ಲಿ ಫಿಲ್ ಸಾಲ್ಟ್ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದ್ದು, ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಇದೇ ಸೆಪ್ಟೆಂಬರ್ 11 ರಂದು ನಡೆಯಲಿದೆ. ಇದೀಗ ಗಾಯದಿಂದಾಗಿ ಟಿ20 ಸರಣಿಯಿಂದ ಹೊರಬಿದ್ದಿರುವ ಜೋಸ್ ಬಟ್ಲರ್, ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಏಕದಿನ ಸರಣಿಯಲ್ಲಿ ಆಡುವುದು ಕೂಡ ಅನುಮಾನ ಎನ್ನಲಾಗುತ್ತಿದೆ.

ಟಿ20 ಸರಣಿಯ ನಂತರ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಗೂ ಇಂಗ್ಲೆಂಡ್ ತಂಡವನ್ನು ಪ್ರಕಟಿಸಿದೆ. ಏಕದಿನ ಸರಣಿಯಲ್ಲಿ ಬಟ್ಲರ್ ಆಡುವುದು ಅನುಮಾನವಾಗಿರುವುದರಿಂದ ಅವರ ಸ್ಥಾನದಲ್ಲಿ ಬ್ಯಾಟ್ಸ್‌ಮನ್ ಜೋರ್ಡಾನ್ ಕಾಕ್ಸ್ ಅವರನ್ನು ಆಯ್ಕೆ ಮಾಡಲಾಗಿದೆ. 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆಯಲಿದೆ.

ಟಿ20 ಸರಣಿಗೆ ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್ (ನಾಯಕ) ಜೋಫ್ರಾ ಆರ್ಚರ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋರ್ಡಾನ್ ಕಾಕ್ಸ್, ಸ್ಯಾಮ್ ಕರನ್, ಜೋಶ್ ಹಲ್, ವಿಲ್ ಜಾಕ್ವೆಸ್, ಲಿಯಾಮ್ ಲಿವಿಂಗ್‌ಸ್ಟೋನ್, ಸಾಕಿಬ್ ಮಹಮೂದ್, ಡಾನ್ ಮೌಸ್ಲಿ, ಜೇಮೀ ಓವರ್‌ಟನ್, ಆದಿಲ್ ರಶೀದ್, ರೀಸ್ ಟೋಪ್ಲಿ, ಜಾನ್ ಟರ್ನರ್.

ಏಕದಿನ ಸರಣಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಜೋಶ್ ಹಲ್, ವಿಲ್ ಜಾಕ್ಸ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೇಮೀ ಸ್ಮಿತ್, ರೀಸ್ ಟೋಪ್ಲಿ, ಜಾನ್ ಟರ್ನರ್.









