Jasprit Bumrah: ಜಸ್​ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿಯಲು ಇದುವೇ ಕಾರಣ

ENG vs IND: ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಮೊದಲ ಪಂದ್ಯದಲ್ಲಿ ಬುಮ್ರಾ ಕೇವಲ 19 ರನ್​ಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ತಂಡವನ್ನು ಎಡೆಮುರಿ ಕಟ್ಟಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jul 17, 2022 | 3:43 PM

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಟೀಮ್ ಇಂಡಿಯಾ ಪ್ರಮುಖ ಬೌಲರೇ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂಬುದು ವಿಶೇಷ. ಹೌದು, ಜಸ್​ಪ್ರೀತ್ ಬುಮ್ರಾ 3ನೇ ಏಕದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದಿದ್ದಾರೆ. ಟಾಸ್ ಗೆದ್ದ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಒಂದು ಬದಲಾವಣೆ ಎಂದು ತಿಳಿಸಿದ್ದರು.

1 / 6
ಅದರಂತೆ ಜಸ್​ಪ್ರೀತ್ ಬುಮ್ರಾ ಅವರು ಹೊರಗುಳಿದಿದ್ದಾರೆ. ಅವರ ಬದಲಿಗೆ ಮೊಹಮ್ಮದ್ ಸಿರಾಜ್​ಗೆ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ರೋಹಿತ್ ಶರ್ಮಾ ತಿಳಿಸಿದ್ದರು. ಇದರ ಬೆನ್ನಲ್ಲೇ ನಿರ್ಣಾಯಕ ಪಂದ್ಯದಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 6
ಈ ಪ್ರಶ್ನೆಗೆ ಇಲ್ಲಿದೆ ಉತ್ತರ...ಓಲ್ಡ್ ಟ್ರಾಫರ್ಡ್​ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದ ವೇಳೆ ಜಸ್​ಪ್ರೀತ್ ಬುಮ್ರಾ ಅವರ ಕಾಲು ಉಳುಕಿದೆ. ಹೀಗಾಗಿ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇದು ಗಂಭೀರ ಗಾಯವಲ್ಲದಿದ್ದರೂ, ಉಳುಕಿನೊಂದಿಗೆ ಬೌಲಿಂಗ್ ಮಾಡಿದ್ರೆ ಸಮಸ್ಯೆ ಬಿಗಡಾಯಿಸುವ ಸಾಧ್ಯತೆಯಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾಗೆ ಫಿಸಿಯೋ ವಿಶ್ರಾಂತಿ ಸೂಚಿಸಿದ್ದಾರೆ.

3 / 6
ಇತ್ತ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಮೊದಲ ಪಂದ್ಯದಲ್ಲಿ ಬುಮ್ರಾ ಕೇವಲ 19 ರನ್​ಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ತಂಡವನ್ನು ಎಡೆಮುರಿ ಕಟ್ಟಿದ್ದರು. ಇನ್ನು 2ನೇ ಪಂದ್ಯದಲ್ಲೂ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ 1-1 ಅಂತರದಲ್ಲಿರುವ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವುದು ಇಂಗ್ಲೆಂಡ್ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿವೆ.

4 / 6
ಇಂಗ್ಲೆಂಡ್ ಪ್ಲೇಯಿಂಗ್ 11: ಜೇಸನ್ ರಾಯ್ , ಜಾನಿ ಬೈರ್‌ಸ್ಟೋವ್ , ಜೋ ರೂಟ್ , ಬೆನ್ ಸ್ಟೋಕ್ಸ್ , ಜೋಸ್ ಬಟ್ಲರ್ (ನಾಯಕ) ಲಿಯಾಮ್ ಲಿವಿಂಗ್‌ಸ್ಟೋನ್ , ಮೊಯಿನ್ ಅಲಿ , ಕ್ರೇಗ್ ಓವರ್‌ಟನ್ , ಡೇವಿಡ್ ವಿಲ್ಲಿ , ಬ್ರೈಡನ್ ಕಾರ್ಸೆ , ರೀಸ್ ಟೋಪ್ಲಿ

5 / 6
ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶಿಖರ್ ಧವನ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್ ( ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಯುಜ್ವೇಂದ್ರ ಚಾಹಲ್ , ಪ್ರಸಿದ್ಧ್ ಕೃಷ್ಣ

6 / 6
Follow us
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್