Virat Kohli: ವಿರಾಟ್ ಕೊಹ್ಲಿ ತಂಡದಿಂದ ಹೊರಗುಳಿಯಲು ಇದುವೇ ಕಾರಣ
TV9 Web | Updated By: ಝಾಹಿರ್ ಯೂಸುಫ್
Updated on:
Jul 12, 2022 | 6:04 PM
England vs India 1st Odi: ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿಯ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಅವಕಾಶ ಪಡೆದಿದ್ದಾರೆ.
1 / 5
ಲಂಡನ್ನ ಕಿಯಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಆದರೆ ತಂಡದ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದಾಗ ಆ ಪಟ್ಟಿಯಲ್ಲಿ ಕೊಹ್ಲಿಯ ಹೆಸರು ಇರಲಿಲ್ಲ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಗೆ ಒಳಗಾಗಿರುವುದು.
2 / 5
ಹೌದು, ವಿರಾಟ್ ಕೊಹ್ಲಿಗೆ ತೊಡೆ ಸಂದು ನೋವಿನ ಸಮಸ್ಯೆ ಎದುರಾಗಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಮೊದಲ ಏಕದಿನ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ನಿರ್ಧರಿಸಿದ್ದಾರೆ.
3 / 5
ಇದಾಗ್ಯೂ ಕೊಹ್ಲಿ 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಈಗಾಗಲೇ ವೈದ್ಯಕೀಯ ತಪಾಸಣೆ ಮುಗಿಸಿ ಕೊಹ್ಲಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಹಾಗಾಗಿ ಜುಲೈ 14 ರಂದು ನಡೆಯಲಿರುವ 2ನೇ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಮೊದಲ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.
4 / 5
ಇಂಗ್ಲೆಂಡ್ (ಪ್ಲೇಯಿಂಗ್ 11): ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
5 / 5
ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ