ENG vs IRE: ಚೊಚ್ಚಲ ದ್ವಿಶತಕ ಸಿಡಿಸಿ 41 ವರ್ಷಗಳ ಹಳೆಯ ದಾಖಲೆ ಮುರಿದ ಇಂಗ್ಲೆಂಡ್ ಬ್ಯಾಟರ್..!

ENG vs IRE: ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಬಂದ ಬಂದವರೆಲ್ಲ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಹಲವು ದಾಖಲೆಗಳನ್ನು ಸೃಷ್ಟಿಸಿದರು. ಅಂತಹ ಕೆಲವು ಪ್ರಮುಖ ದಾಖಲೆಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Jun 03, 2023 | 1:08 PM

ಆಸ್ಟ್ರೇಲಿಯಾ ವಿರುದ್ಧದ ಆಶಸ್ ಸರಣಿಗೂ ಮುನ್ನ ಐರ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನಾಡುತ್ತಿರುವ ಇಂಗ್ಲೆಂಡ್​ ಭರ್ಜರಿ ತಯಾರಿ ಆರಂಭಿಸಿದೆ. ಈಗಾಗಲೇ 2ನೇ ದಿನದಾಟ ಮುಗಿದಿದ್ದು, 2ನೇ ಇನ್ನಿಂಗ್ಸ್ ಆರಂಭಿಸಿರುವ ಐರ್ಲೆಂಡ್ 97 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ 172 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಆ ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಬಂದ ಬಂದವರೆಲ್ಲ ಭರ್ಜರಿ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ಸೃಷ್ಟಿಸಿದರು. ಅಂತಹ ಕೆಲವು ಪ್ರಮುಖ ದಾಖಲೆಗಳ ವಿವರ ಇಲ್ಲಿದೆ.

2 / 6
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಎರಡನೇ ದಿನ ಕೇವಲ 207 ಎಸೆತಗಳಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿದ ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ ಒಲಿ ಪೋಪ್, ಆಂಗ್ಲರ ನೆಲದಲ್ಲಿ ಅತಿ ವೇಗದ ದ್ವಿಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಈ ಹಿಂದೆ ಓವಲ್‌ನಲ್ಲಿ ಭಾರತದ ವಿರುದ್ಧ 220 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದ ಇಯಾನ್ ಬೋಥಮ್ ಅವರ ಹೆಸರಲ್ಲಿ ಈ ದಾಖಲೆ ಇತ್ತು.

3 / 6
ಇನ್ನು ಇಂಗ್ಲೆಂಡ್ ಪರ 182 ರನ್​ಗಳ ಇನ್ನಿಂಗ್ಸ್ ಆಡಿದ ಬೆನ್ ಡಕೆಟ್, ರನ್-ಎ ಬಾಲ್ ಅಂದರೆ, 150 ಎಸೆತಗಳಲ್ಲಿ 150 ರನ್ ಬಾರಿಸುವ ಮೂಲಕ ಲಾರ್ಡ್ಸ್‌ನಲ್ಲಿ ಅತಿವೇಗದ ಟೆಸ್ಟ್ 150 ರನ್ ಪೂರೈಸಿದ ದಾಖಲೆ ಕೂಡ ಬರೆದರು. ಈ ಮೊದಲು ಈ ದಾಖಲೆ 166 ಎಸೆತಗಳಲ್ಲಿ 150 ರನ್ ಪೂರೈಸಿದ್ದ ಆಸ್ಟ್ರೇಲಿಯಾದ ಡಾನ್ ಬ್ರಾಡ್‌ಮನ್ ಅವರ ಹೆಸರಿನಲ್ಲಿತ್ತು.

4 / 6
ಇವರಿಬ್ಬರನ್ನು ಹೊರತುಪಡಿಸಿ, ಅನುಭವಿ ಬ್ಯಾಟ್ಸ್‌ಮನ್ ಜೋ ರೂಟ್ ಕೂಡ ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ 56 ರನ್ ಸಿಡಿಸಿದ ರೂಟ್, ತಮ್ಮ ಟೆಸ್ಟ್‌ ವೃತ್ತಿ ಜೀವನದ 11,000 ರನ್‌ಗಳನ್ನು ಪೂರೈಸಿದರು. ಈ ಮೂಲಕ ಇಂಗ್ಲೆಂಡ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

5 / 6
ಸದ್ಯ ಐರ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನಾಡುತ್ತಿರುವ ಇಂಗ್ಲೆಂಡ್, ಈ ಪಂದ್ಯದ ನಂತರ ಆಸೀಸ್ ವಿರುದ್ಧ ಆಶಸ್ ಸರಣಿಯನ್ನಾಡಲಿದೆ. ಎಡ್ಜ್‌ಬಾಸ್ಟನ್‌ನಲ್ಲಿ ಮೊದಲ ಆಶಸ್ ಟೆಸ್ಟ್ ಜೂನ್ 16 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲು ಆಸ್ಟ್ರೇಲಿಯಾ ಓವಲ್‌ನಲ್ಲಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ.

6 / 6

Published On - 1:05 pm, Sat, 3 June 23

Follow us
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ