ENG vs NZ: ಅಲೆನ್ ಸಿಡಿಲಬ್ಬರದ ಬ್ಯಾಟಿಂಗ್; ಆಂಗ್ಲರನ್ನು 74 ರನ್‌ಗಳಿಂದ ಮಣಿಸಿದ ನ್ಯೂಜಿಲೆಂಡ್
ENG vs NZ: ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ 4 ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು, ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಸರಣಿ ಜೀವಂತವಾಗಿರಿಸಲು ನ್ಯೂಜಿಲೆಂಡ್ ಶತಾಯಗತಾಯ ಮೂರನೇ ಟಿ20 ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.