ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 206 ಎಸೆತಗಳನ್ನು ಎದುರಿಸಿ 143 ರನ್ ಬಾರಿಸಿದ್ದ ಜೋ ರೂಟ್, ಎರಡನೇ ಇನ್ನಿಂಗ್ಸ್ನಲ್ಲಿ 121 ಎಸೆತಗಳನ್ನು ಎದುರಿಸಿ 103 ರನ್ಗಳ ಶತಕದ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ರೂಟ್, ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.