ENG vs SL: 2ನೇ ಇನ್ನಿಂಗ್ಸ್​ನಲ್ಲೂ ಶತಕ ಸಿಡಿಸಿ ಹಲವು ದಾಖಲೆ ಮುರಿದ ಜೋ ರೂಟ್

Updated on: Aug 31, 2024 | 8:49 PM

Joe Root: ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 206 ಎಸೆತಗಳನ್ನು ಎದುರಿಸಿ 143 ರನ್ ಬಾರಿಸಿದ್ದ ಜೋ ರೂಟ್, ಎರಡನೇ ಇನ್ನಿಂಗ್ಸ್​ನಲ್ಲಿ 121 ಎಸೆತಗಳನ್ನು ಎದುರಿಸಿ 103 ರನ್​ಗಳ ಶತಕದ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ರೂಟ್, ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

1 / 7
ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್‌ನ ದಿಗ್ಗಜ ಬ್ಯಾಟ್ಸ್‌ಮನ್ ಜೋ ರೂಟ್ ಸತತ ಎರಡನೇ ಇನ್ನಿಂಗ್ಸ್​ನಲ್ಲೂ ಶತಕದ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ.

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್‌ನ ದಿಗ್ಗಜ ಬ್ಯಾಟ್ಸ್‌ಮನ್ ಜೋ ರೂಟ್ ಸತತ ಎರಡನೇ ಇನ್ನಿಂಗ್ಸ್​ನಲ್ಲೂ ಶತಕದ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ.

2 / 7

ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 206 ಎಸೆತಗಳನ್ನು ಎದುರಿಸಿ 143 ರನ್ ಬಾರಿಸಿದ್ದ ಜೋ ರೂಟ್, ಎರಡನೇ ಇನ್ನಿಂಗ್ಸ್​ನಲ್ಲಿ 121 ಎಸೆತಗಳನ್ನು ಎದುರಿಸಿ 103 ರನ್​ಗಳ ಶತಕದ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ರೂಟ್, ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

3 / 7

ವಾಸ್ತವವಾಗು ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು, ಇಂಗ್ಲೆಂಡ್‌ನ ಮೈಕೆಲ್ ವಾನ್. ಅವರು 2004 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಈ ಸಾಧನೆ ಮಾಡಿದ್ದರು. ಇದೀಗ 20 ವರ್ಷಗಳ ಬಳಿಕ ರೂಟ್ ಈ ದಾಖಲೆ ಮಾಡಿದ್ದಾರೆ. ಮೈಕೆಲ್ ವಾನ್‌ಗಿಂತ ಮೊದಲು ಗ್ರಹಾಂ ಗೂಚ್ (1990) ಮತ್ತು ಜಾರ್ಜ್ ಹ್ಯಾಡ್ಲಿ (1939) ಈ ಸಾಧನೆ ಮಾಡಿದ್ದರು.

4 / 7

ಜೋ ರೂಟ್ ಇದೇ ಮೊದಲ ಬಾರಿಗೆ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಸತತ ಎರಡು ಇನ್ನಿಂಗ್ಸ್​ಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ರೂಟ್ ಅವರ ಶತಕಗಳ ಸಂಖ್ಯೆ 34 ಕ್ಕೇರಿದೆ.

5 / 7

ಜೋ ರೂಟ್ ತಮ್ಮ ಶತಕದೊಂದಿಗೆ ತಂಡದ ಮಾಜಿ ನಾಯಕ ಅಲೆಸ್ಟರ್ ಕುಕ್ ಅವರನ್ನು ಹಿಂದಿಕ್ಕಿದ್ದಾರೆ. ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ಪರ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅಲಸ್ಟೈರ್ ಕುಕ್ ಇಂಗ್ಲೆಂಡ್ ಪರ ಟೆಸ್ಟ್​ನಲ್ಲಿ 33 ಶತಕ ಸಿಡಿಸಿದ್ದರು. ಇದೀಗ 34ನೇ ಟೆಸ್ಟ್ ಶತಕ ಬಾರಿಸಿರುವ ರೂಟ್, ಕುಕ್​ರನ್ನು ಹಿಂದಿಕ್ಕಿದ್ದಾರೆ.

6 / 7

ಜೋ ರೂಟ್ ಸಕ್ರಿಯ ಆಟಗಾರರ ಪಟ್ಟಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್, ಸ್ಟೀವ್ ಸ್ಮಿತ್ ಮತ್ತು ಜೋ ರೂಟ್ ಅವರ ಫ್ಯಾಬ್-4 ಪಟ್ಟಿಯಲ್ಲಿ ಜೋ ರೂಟ್ 34 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

7 / 7

ಉಳಿದಂತೆ ಕೇನ್ ವಿಲಿಯಮ್ಸನ್ ಮತ್ತು ಸ್ಟೀವ್ ಸ್ಮಿತ್ ತಲಾ 32 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 29 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ವಿಶೇಷವೆಂದರೆ 2021ರ ಜನವರಿಯಲ್ಲಿ ವಿರಾಟ್ ಕೊಹ್ಲಿ 27 ಶತಕಗಳೊಂದಿಗೆ ಮುಂಚೂಣಿಯಲ್ಲಿದ್ದರು. ಆ ವೇಳೆ ರೂಟ್ ಕೇವಲ 17 ಶತಕಗಳನ್ನು ಸಿಡಿಸಿದ್ದರು. ಆದರೆ ಕಳೆದ ಮೂರು ವರ್ಷಗಳಲ್ಲಿ ಎಲ್ಲರನ್ನೂ ಹಿಂದಿಕ್ಕಿರುವ ರೂಟ್ ಅಗ್ರಸ್ಥಾನಕ್ಕೇರಿದ್ದಾರೆ.

Loading...
Unable to load recommendations.
Follow Us