ಇದಲ್ಲದೆ ಸಕ್ರಿಯ ಅಂತರಾಷ್ಟ್ರೀಯ ಕ್ರಿಕೆಟಿಗರಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ರೂಟ್ ಪಾತ್ರರಾಗಿದ್ದಾರೆ. ರೂಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 49 ಶತಕಗಳನ್ನು ಬಾರಿಸಿದ್ದು, ಈ ವಿಚಾರದಲ್ಲಿ ರೋಹಿತ್ ಶರ್ಮಾ ದಾಖಲೆಯನ್ನು ಮುರಿದಿದ್ದಾರೆ. ರೋಹಿತ್ ಈವರೆಗೆ 48 ಶತಕಗಳನ್ನು ಬಾರಿಸಿದ್ದು, ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 80 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.