AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ದಾಖಲೆಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಇಂಗ್ಲೆಂಡ್

England vd Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯು 2-1 ಅಂತರಕ್ಕೆ ಬಂದು ನಿಂತಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡ ಸರಣಿ ಆಸೆಯನ್ನು ಜೀವಂತವಿರಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Sep 25, 2024 | 7:53 AM

Share
ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲಿನ ರುಚಿ ತೋರಿಸುವಲ್ಲಿ ಕೊನೆಗೂ ಇಂಗ್ಲೆಂಡ್ ತಂಡ ಯಶಸ್ವಿಯಾಗಿದೆ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಕಳೆದ 348 ದಿನಗಳಿಂದ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದ್ದ ಆಸ್ಟ್ರೇಲಿಯಾ ತಂಡದ ದಾಖಲೆಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಂತಾಗಿದೆ.

1 / 6
 ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್​ಸೈಡ್ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ (60), ಅಲೆಕ್ಸ್ ಕ್ಯಾರಿ (77) ಅರ್ಧಶತಕ ಬಾರಿಸಿ ಮಿಂಚಿದ್ದರು. ಇನ್ನು ಕೊನೆಯ ಓವರ್​ಗಳ ವೇಳೆ ಆರೋನ್ ಹಾರ್ಡಿ 44 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 304 ರನ್​ ಕಲೆಹಾಕಿತು.

2 / 6
305 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಫಿಲ್ ಸಾಲ್ಟ್ (0) ಹಾಗೂ ಬೆನ್ ಡಕೆಟ್ (8) ಮೂರು ಓವರ್​ಗಳ ಒಳಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ವಿಲ್ ಜಾಕ್ಸ್ ಹಾಗೂ ಹ್ಯಾರಿ ಬ್ರೂಕ್ ಅತ್ಯುತ್ತಮ ಜೊತೆಯಾಟವಾಡಿದರು. ಜಾಕ್ಸ್ 84 ರನ್ ಬಾರಿಸಿ ಔಟಾದರೆ, ಬ್ರೂಕ್ ಅಜೇಯ 110 ರನ್ ಬಾರಿಸಿದರು.

3 / 6
ಇಂಗ್ಲೆಂಡ್ ತಂಡವು 4 ವಿಕೆಟ್ ಕಳೆದುಕೊಂಡು 257 ರನ್​ಗಳಿಸಿದ್ದ ವೇಳೆ ಮಳೆ ಬಂದಿದ್ದರಿಂದ ಫಲಿತಾಂಶ ನಿರ್ಧರಿಸಲು DLS ನಿಯಮದ ಮೊರೆ ಹೋಗಲಾಯಿತು. ಈ ವೇಳೆ ಆಸ್ಟ್ರೇಲಿಯಾಗಿಂತ ಇಂಗ್ಲೆಂಡ್ ತಂಡವು 46 ರನ್​ಗಳ ಮುನ್ನಡೆ ಹೊಂದಿದ್ದರಿಂದ ಆತಿಥೇಯರನ್ನು ವಿಜಯಿ ಎಂದು ಘೋಷಿಸಲಾಯಿತು.

4 / 6
ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಿದೆ. ಅಂದರೆ ಆಸೀಸ್ ಪಡೆಯು ಏಕದಿನ ಕ್ರಿಕೆಟ್​ನಲ್ಲಿ ಸತತ 14 ಪಂದ್ಯಗಳಲ್ಲಿ ಗೆಲುವು ದಾಖಲಿಸುತ್ತಾ ಬಂದಿದೆ. ಆದರೆ 15ನೇ ಏಕದಿನ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ಬರೆಯುವ ಅವಕಾಶ ಕೈ ತಪ್ಪಿಸಿಕೊಂಡಿದೆ. ಏಕದಿನ ಕ್ರಿಕೆಟ್​ನಲ್ಲಿ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ಹೊಸ ದಾಖಲೆ ಬರೆಯಲು ಆಸ್ಟ್ರೇಲಿಯಾಗೆ ಕೇವಲ 8 ಗೆಲುವಿನ ಅವಶ್ಯಕತೆಯಿತ್ತು. ಆದರೀಗ 14 ಪಂದ್ಯಗಳೊಂದಿಗೆ ಈ ದಾಖಲೆ ಪಟ್ಟಿಯಲ್ಲಿ 2ನೇ ಸ್ಥಾನವನ್ನು ಅಲಂಕರಿಸಿದೆ.

5 / 6
ವಿಶೇಷ ಎಂದರೆ ಈ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕೂಡ ಆಸ್ಟ್ರೇಲಿಯಾ ತಂಡ. 2003 ರಲ್ಲಿ ರಿಕಿ ಪಾಂಟಿಂಗ್ ನಾಯಕತ್ವದ ಆಸೀಸ್ ಪಡೆಯು ಸತತ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಈ ವಿಶ್ವ ದಾಖಲೆ ನಿರ್ಮಿಸಿದೆ. 11 ವರ್ಷಗಳ ಈ ಹಳೆಯ ದಾಖಲೆಯನ್ನು ಮುರಿಯುವತ್ತ ದಾಪುಗಾಲಿಟ್ಟಿದ್ದ ಆಸ್ಟ್ರೇಲಿಯಾ ತಂಡಕ್ಕೆ ಕೊನೆಗೂ ಸೋಲಿನ ರುಚಿ ತೋರಿಸುವಲ್ಲಿ ಇಂಗ್ಲೆಂಡ್ ತಂಡ ಯಶಸ್ವಿಯಾಗಿದೆ.

6 / 6
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್