ಚೆಸ್ಟರ್-ಲೆ-ಸ್ಟ್ರೀಟ್ನ ರಿವರ್ಸೈಡ್ ಗ್ರೌಂಡ್ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ (60), ಅಲೆಕ್ಸ್ ಕ್ಯಾರಿ (77) ಅರ್ಧಶತಕ ಬಾರಿಸಿ ಮಿಂಚಿದ್ದರು. ಇನ್ನು ಕೊನೆಯ ಓವರ್ಗಳ ವೇಳೆ ಆರೋನ್ ಹಾರ್ಡಿ 44 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 304 ರನ್ ಕಲೆಹಾಕಿತು.