5 ಲಕ್ಷ ರನ್​: ಟೆಸ್ಟ್​​ ಕ್ರಿಕೆಟ್​​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಇಂಗ್ಲೆಂಡ್

|

Updated on: Dec 07, 2024 | 2:19 PM

New Zealand vs England: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್​​ನ ಮೊದಲ ಇನಿಂಗ್ಸ್​​ನಲ್ಲಿ ಇಂಗ್ಲೆಂಡ್ 280 ರನ್ ಗಳಿಸಿದರೆ, ನ್ಯೂಝಿಲೆಂಡ್ 125 ರನ್​​ಗಳಿಗೆ ಆಲೌಟ್ ಆಗಿದೆ. ಇನ್ನು ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 378 ರನ್ ಕಲೆಹಾಕಿದೆ.

1 / 6
147 ವರ್ಷಗಳ ಟೆಸ್ಟ್ ಕ್ರಿಕೆಟ್​​ನಲ್ಲಿ ಇಂಗ್ಲೆಂಡ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಬರೋಬ್ಬರಿ 5 ಲಕ್ಷ ರನ್​​ಗಳನ್ನು ಪೂರೈಸುವ ಮೂಲಕ ಎಂಬುದು. ಅಂದರೆ ಟೆಸ್ಟ್​​ ಕ್ರಿಕೆಟ್​​ನಲ್ಲಿ ಇಂಗ್ಲೆಂಡ್​ ತಂಡವು ಒಟ್ಟು 5 ಲಕ್ಷ ರನ್​​ಗಳನ್ನು ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದೆ.

2 / 6
ವೆಲ್ಲಿಂಗ್ಟನ್​​ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 378 ರನ್ ಕಲೆಹಾಕಿದೆ. ಈ ರನ್​​ಗಳೊಂದಿಗೆ ಆಂಗ್ಲರು ಟೆಸ್ಟ್​​ನಲ್ಲಿ 5 ಲಕ್ಷ ರನ್​​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.

3 / 6
ಈವರೆಗೆ 1082 ಟೆಸ್ಟ್ ಪಂದ್ಯಗಳನ್ನಾಡಿರುವ ಇಂಗ್ಲೆಂಡ್ ತಂಡವು 500,000 ರನ್​​ಗಳನ್ನು ಕಲೆಹಾಕಿ ಅಗ್ರಸ್ಥಾನದಲ್ಲಿದ್ದರೆ, 428794 ರನ್ ಗಳಿಸಿರುವ ಆಸ್ಟ್ರೇಲಿಯಾ ತಂಡವು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.

4 / 6
ಇನ್ನು 586 ಟೆಸ್ಟ್ ಪಂದ್ಯಗಳನ್ನಾಡಿರುವ ಭಾರತ ತಂಡವು ಈವರೆಗೆ 278700 ರನ್ ಗಳಿಸಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ಮೂರನೇ ತಂಡ ಎನಿಸಿಕೊಂಡಿದೆ.

5 / 6
5 ಲಕ್ಷ ರನ್​​ಗಳೊಂದಿಗೆ ಇಂಗ್ಲೆಂಡ್ ತಂಡವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆಯನ್ನು ಸಹ ಹೊಂದಿದೆ. ಆಂಗ್ಲರು ಈವರೆಗೆ 929 ಶತಕ ಸಿಡಿಸಿದ್ದಾರೆ. ಇನ್ನು ಆಸ್ಟ್ರೇಲಿಯಾ 892 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.

6 / 6
ಇನ್ನು ಟೆಸ್ಟ್​​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಭಾರತೀಯರು ಮೂರನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ಬ್ಯಾಟರ್​​ಗಳು ಈವರೆಗೆ 552 ಸೆಂಚುರಿ ಸಿಡಿಸಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.