AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ಗೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್..!

Alex Hales Retirement: ಸ್ಫೋಟಕ ಬ್ಯಾಟಿಂಗ್ ಮತ್ತು ವಿವಾದಗಳಿಂದಲೇ ಸಾಕಷ್ಟು ಚರ್ಚೆಗೊಳಗಾಗಿದ್ದ 34 ವರ್ಷದ ಹೇಲ್ಸ್ ಶುಕ್ರವಾರ, ಆಗಸ್ಟ್ 4 ರಂದು ಹೇಳಿಕೆ ನೀಡುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ.

ಪೃಥ್ವಿಶಂಕರ
|

Updated on: Aug 05, 2023 | 7:32 AM

Share
ಇಂಗ್ಲೆಂಡ್ ಕ್ರಿಕೆಟ್‌ನಲ್ಲಿ ಒಂದು ವಾರದೊಳಗೆ ಇಬ್ಬರು ಅನುಭವಿ ಆಟಗಾರರು ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಆಶಸ್ ಸರಣಿಯ ಕೊನೆಯ ಟೆಸ್ಟ್‌ನೊಂದಿಗೆ, ಇಂಗ್ಲೆಂಡ್‌ನ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಸ್ಟುವರ್ಟ್ ಬ್ರಾಡ್ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು.

1 / 7
ಬ್ರಾಡ್ ನಿವೃತ್ತಿ ಘೋಷಿಸಿದ 6 ದಿನಗಳ ಬಳಿಕ ಇಂಗ್ಲೆಂಡ್​ನ ಸ್ಫೋಟಕ ಬ್ಯಾಟ್ಸ್​ಮನ್ ಅಲೆಕ್ಸ್ ಹೇಲ್ಸ್ ಕೂಡ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ವರ್ಷದ ಟಿ20 ವಿಶ್ವಕಪ್‌ನ ಫೈನಲ್​ನಲ್ಲಿ ಇಂಗ್ಲೆಂಡ್ ಪರ ಆಡಿದ್ದ ಹೇಲ್ಸ್, ಇಂಗ್ಲೆಂಡ್ ತಂಡವನ್ನು ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರಲ್ಲಿ ಭಾರತದ ವಿರುದ್ಧದ ಸೆಮಿಫೈನಲ್‌ನಲ್ಲಿ ಸ್ಫೋಟಕ ಇನ್ನಿಂಗ್ಸ್ ಕೂಡ ತುಂಬಾ ವಿಶೇಷವಾಗಿತ್ತು.

2 / 7
ಸ್ಫೋಟಕ ಬ್ಯಾಟಿಂಗ್ ಮತ್ತು ವಿವಾದಗಳಿಂದಲೇ ಸಾಕಷ್ಟು ಚರ್ಚೆಗೊಳಗಾಗಿದ್ದ 34 ವರ್ಷದ ಹೇಲ್ಸ್ ಶುಕ್ರವಾರ, ಆಗಸ್ಟ್ 4 ರಂದು ಹೇಳಿಕೆ ನೀಡುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ‘ಎಲ್ಲಾ ಮೂರು ಸ್ವರೂಪಗಳಲ್ಲಿ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿ 156 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವುದು ನನಗೆ ಸಿಕ್ಕ ಶ್ರೇಷ್ಠ ಗೌರವವೆಂದು ಹೇಲ್ಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

3 / 7
ಇನ್ನು ಡ್ರಗ್ಸ್ ಕೇಸ್​ನಲ್ಲಿ ಸಿಕ್ಕಿಬಿದ್ದಿದ್ದ ಹೇಲ್ಸ್​ರನ್ನು 2019 ರ ವಿಶ್ವಕಪ್‌ಗೆ ಮುನ್ನ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಅಮಾನತುಗೊಳಿಸಿತ್ತು. ಇದರಿಂದಾಗಿ ತವರಿನಲ್ಲಿ ನಡೆದ ವಿಶ್ವಕಪ್​ನಲ್ಲಿ ಹೇಲ್ಸ್ ಆಡಲಾಗಲಿಲ್ಲ. ಇದರಿಂದಾಗಿ ಹೇಲ್ಸ್, ಸುಮಾರು ನಾಲ್ಕು ವರ್ಷಗಳ ಕಾಲ ತಂಡದಿಂದ ಹೊರಗುಳಿಯಬೇಕಾಯ್ತು.

4 / 7
ಆದರೆ ಕಳೆದ ವರ್ಷ ಟಿ20 ವಿಶ್ವಕಪ್‌ಗೆ ಮುಂಚೆಯೇ, ತಂಡಕ್ಕೆ ಮರಳಿದ ಹೇಲ್ಸ್ ಪಂದ್ಯಾವಳಿಯ 6 ಇನ್ನಿಂಗ್ಸ್‌ಗಳಲ್ಲಿ 212 ರನ್ ಸಿಡಿಸಿದರು. ಇದರಲ್ಲಿ ಎರಡು ಅರ್ಧ ಶತಕಗಳು ಸೇರಿದ್ದವು. ಇದರಲ್ಲಿ, ಭಾರತ ವಿರುದ್ಧದ ಸೆಮಿಫೈನಲ್‌ನಲ್ಲಿ 86 ರನ್‌ಗಳ ಅಜೇಯ ಇನ್ನಿಂಗ್ಸ್ ಅವರ ದೊಡ್ಡ ಸ್ಕೋರ್ ಆಗಿತ್ತು. ಅದರ ಆಧಾರದ ಮೇಲೆ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಭಾರತವನ್ನು ಮಣಿಸಿತ್ತು.

5 / 7
2011 ರಲ್ಲಿ ಇಂಗ್ಲೆಂಡ್‌ ಪರ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಹೇಲ್ಸ್, ವೇಗದ ಬ್ಯಾಟಿಂಗ್‌ನೊಂದಿಗೆ ವಿಶೇಷ ಛಾಪು ಮೂಡಿಸಿದರು. ನಂತರ 2014ರಲ್ಲಿ ಏಕದಿನ ಹಾಗೂ 2015ರಲ್ಲಿ ಟೆಸ್ಟ್‌ ಕ್ರಿಕೆಟ್​ಗೆ ಪದಾರ್ಪಣೆ. ಅವರ ಆಕ್ರಮಣಕಾರಿ ವರ್ತನೆಯು ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಲಿಲ್ಲ. ಆದರೆ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಹೇಲ್ಸ್ ತಮ್ಮ ಸಾಮರ್ಥ್ಯವನ್ನು ಸಾಭೀತುಪಡಿಸಿದರು.

6 / 7
 ಒಟ್ಟಾರೆಯಾಗಿ, ಹೇಲ್ಸ್ 11 ಟೆಸ್ಟ್, 70 ಏಕದಿನ ಮತ್ತು 75 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಕ್ರಮವಾಗಿ 573 ರನ್, 2419 ರನ್ ಮತ್ತು 2074 ರನ್ ಕಲೆಹಾಕಿದ್ದಾರೆ. ಅವರು ಏಕದಿನ ಮತ್ತು ಟಿ20ಯಲ್ಲಿ ಒಟ್ಟು 7 ಶತಕಗಳನ್ನು ಸಿಡಿಸಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ