
ಇಂಗ್ಲೆಂಡ್ ತಂಡ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಜಯ ಸಾಧಿಸಿದೆ. ಮಂಗಳವಾರ ನಡೆದ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ತಂಡ ಕ್ಲೀನ್ ಸ್ವೀಪ್ ಮಾಡಿತು. ಈ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇನ್ನಿಂಗ್ಸ್ ಆಡಿ 86 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಬಟ್ಲರ್ ಮತ್ತೊಮ್ಮೆ ತಮ್ಮ ಬಿರುಸಿನ ಶೈಲಿಯನ್ನು ಪ್ರದರ್ಶಿಸಿದರು, 86 ರನ್ ಗಳಿಸಲು 64 ಎಸೆತಗಳನ್ನು ತೆಗೆದುಕೊಂಡರು. ಅವರ ಇನ್ನಿಂಗ್ಸ್‌ನಲ್ಲಿ, ಏಳು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳನ್ನು ಹೊಡೆದರು. ಇದರಲ್ಲಿ ಅವರ ಸ್ಟ್ರೈಕ್ ರೇಟ್ 134.38 ಆಗಿತ್ತು. ಬಟ್ಲರ್ ಈ ಇನ್ನಿಂಗ್ಸ್‌ನೊಂದಿಗೆ ಭಾರತದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.


